Back

ⓘ ರಾಜ್‌ಕುಮಾರ್. ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನ ..



                                               

ಡಾ. ರಾಜ್‌ಕುಮಾರ್ ರಸ್ತೆ

ಡಾ. ರಾಜ್‌ಕುಮಾರ್ ರಸ್ತೆ ಬೆಂಗಳೂರಿನ ರಾಜಾಜಿನಗರ ಬಡಾವಣೆಯಲ್ಲಿರುವ ರಸ್ತೆ. ಇದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ.ಕನ್ನಡ ಚಿತ್ರರಂಗದ ಸುಪ್ರಸಿದ್ಧ ನಟ ಡಾ.ರಾಜ್‍ಕುಮಾರ್ ಅವರ ಹೆಸರನ್ನು ಈ ರಸ್ತೆಗೆ ಇಡಲಾಗಿದೆ. ಕರ್ನಾಟಕದ ದಕ್ಷಿಣದ ಆರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ವಾಹನಗಳು ಈ ರಸ್ತೆಯ ಮುಖಾಂತರವೇ ರಾಜಧಾನಿಗೆ ಸಂಚರಿಸುತ್ತವೆ.ಈ ರಸ್ತೆಯಲ್ಲ್ಲಿ ಡಾ.ರಾಜ್‍ಕುಮಾರ್‍‍ರವರ ಸ್ಮಾರಕವನ್ನು ಸ್ಥಾಪಿಸಲಾಗಿದೆ.ಅವರ ಹುಟ್ಟುಹಬ್ಬದಂದು ಈ ರಸ್ತೆಯಲ್ಲಿ ಜನಜಂಗುಳಿಯನ್ನು ಕಾಣಬಹುದು. ಈ ರಸ್ತೆಯು ರಾಜಾಜಿನಗರ ಎಂಟ್ರನ್ಸ್ ನಿಂದ ಪ್ರಾರಂಭಗೊಂಡು ರಾಜರಾಜೇಶ್ವರಿ ಕಲ್ಯಾಣ ಮಂದಿರ, ನವರಂಗ್ ಚಿತ್ರ ಮಂದಿರ, ವಿವೇಕಾನಂದ ಕಾಲೇಜು, ಓರಿಯನ್ ಮಾಲ್ ಮುಖಾಂತರ ಸಾಗಿ ರಾಣಿ ಚೆನ್ನಮ್ಮನು ಫಿರ್ಂಗಿಯೊಂದಿಗೆ ನಿಂತಿರುವ ಪ್ ...

                                               

ರಾಜಾಜಿನಗರ

ರಾಜಾಜಿನಗರ ಬೆಂಗಳೂರಿನ ಪಶ್ಚಿಮ ಭಾಗದಲ್ಲಿರುವ ಒಂದು ಬಡಾವಣೆ. ಇದು ಬಸವೇಶ್ವರನಗರ, ಮಲ್ಲೇಶ್ವರಂ, ಮಹಾಲಕ್ಷ್ಮಿ ಬಡಾವಣೆ, ವಿಜಯನಗರ ಮತ್ತು ರಾಜಾಜಿನಗರ ಕೈಗಾರಿಕ ಉಪನಗರಗಳಿಂದ ಸುತ್ತುವರೆದಿದೆ. ರಾಜಾಜಿನಗರವನ್ನು ೨ ಹಂತಗಳಲ್ಲಿ ವಿಂಗಡಿಸಲಾಗಿದ್ದು ಮೊದಲ ಹಂತವನ್ನು ಉತ್ತರದಿಂದ ದಕ್ಷಿಣದವರೆಗೆ ೬ ವಿಭಾಗಗಳಾಗಿ ವಿಂಗಡಿಸಲಾಗಿದೆ. ರಾಜಾಜಿನಗರದ ಕೆಲವು ಪ್ರದೇಶಗಳು ಇತರ ಹೆಸರುಗಳಿಂದ ಕರೆಯಲ್ಪಡುತ್ತವೆ. ಇವುಗಳಲ್ಲಿ ಪ್ರಮುಖ ಸುಬ್ರಮಣ್ಯನಗರ, ಕೇತ್ಮಾರನಹಳ್ಳಿ, ನಾಗಪುರ, ಮರಿಯಪ್ಪನಪಾಳ್ಯ, ಪ್ರಕಾಶನಗರ ಮತ್ತು ಶ್ರೀರಾಂಪುರಂ. ರಾಜಾಜಿನಗರದಿಂದ ಹಾದು ಹೋಗುವ ಕಾರ್ಡ್ ರಸ್ತೆ ೮ ಕಿ.ಮಿ ಉದ್ದವಾಗಿದ್ದು ಬೆಂಗಳೂರಿನ ಅತ್ಯಂತ ಉದ್ದ ರಸ್ತೆಗಳಲ್ಲಿ ಒಂದಾಗಿದೆ. ರಾಜಾಜಿನಗರ ಅನೇಕ ಪ್ರಖ್ಯಾತ ಶಾಲೆ ಮತ್ತು ಕಾಲೇಜುಗಳಿಗೆ ಪ್ರಸಿದ್ದ. ಇದು ಮುಖ್ಯ ಬಸ್ ...

                                               

ಪ್ರವೀಣ್ ನಾಯಕ್

ಕೆ. ಪ್ರವೀಣ್ ನಾಯಕ್ ಜನಿಸಿದ್ದು ಏಪ್ರಿಲ್ ೧೨, ೧೯೬೨ರಲ್ಲಿ ತಂದೆ: ಕೆ. ಕೃಷ್ಣ ನಾಯಕ್ ತಾಯಿ: ರಾಧಾ ನಾಯಕ್ ಸುಮಾರು ಎರಡು ದಶಕಗಳಿಗೂ ಪತ್ರಿಕಾ ಛಾಯಾಗ್ರಾಹಕರಾಗಿ ಹಾಗೂ ಪತ್ರಕರ್ತರಾಗಿ ಕೆ. ಪ್ರವೀಣ್ ನಾಯಕ್ ಕನ್ನಡ ಚಿತ್ರರಂಗದಲ್ಲಿ ಪರಿಚಿತ ಹೆಸರು. ೧೯೮೪ರಲ್ಲಿ ಕನ್ನಡ ದೂರದರ್ಶನದ ಪ್ರಥಮ ಅನೌನ್ಸರ್ ಆಗಿ ವೃತ್ತಿ ಜೀವನ ಆರಂಭ. ನಂತರ ಕನ್ನಡ ಕಿರುತೆರೆಯಲ್ಲಿ ಧಾರಾವಾಹಿಗಳಲ್ಲಿ ಅಭಿನಯ ಹಾಗೂ ನಿರ್ದೇಶನ. `ಜೆಡ್ ಕನ್ನಡ ಚಲನಚಿತ್ರವನ್ನು ನಿರ್ದೇಶಿಸುವುದರ ಮೂಲಕ ಕನ್ನಡ ಚಲನಚಿತ್ರರಂಗಕ್ಕೆ ಪಾದಾರ್ಪಣೆ. `ಹ್ಞೂಂ ಅಂತೀಯಾ ಉಹ್ಞೂಂ ಅಂತೀಯಾ, `ಮೀಸೆ ಚಿಗುರಿದಾಗ ಇವರ ನಿರ್ದೇಶನದ ಇತರ ಕನ್ನಡ ಚಿತ್ರಗಳು. ಶಿವಮಣಿ ನಿರ್ದೇಶಿಸಿ ಅಭಿನಯಿಸಿದ `ಲವ್ ಯು ಹಾಗೂ ಧ್ಯಾನ್ ಅಭಿನಯಿಸಿದ `ಜಾಕ್ಪಾಟ್ ಚಿತ್ರಗಳಿಗೆ ಚಿತ್ರಕಥೆ ಹಾಗೂ ಸಂಭಾಷಣೆ ರಚನೆ. ಪ್ರಸ ...

                                               

ಸದಾಶಿವನಗರ

ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರ ಲೋಯರ್ ಪ್ಯಾಲೇಸ್ ಆರ್ಚರ್ಡ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಒಳಗೊಂಡಿದೆ. ಈ ಬಡಾವಣೆಗೆ ಕರಾವಳಿಯ ಪ್ರಸಿದ್ಧ ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಶ್ರೀ ಕಾರ್ನಾಡು ಸದಾಶಿವರಾವ್ ಅವರ ಹೆಸರನ್ನು ಇಡಲಾಗಿದೆ. ವಿಪರ್ಯಾಸವೆಂದರೆ ಸದಾಶಿವರಾಯರು ಆಗರ್ಭ ಶ್ರೀಮಂತರಾಗಿ ಜನಿಸಿದರೂ ಸರಳ ಜೀವನ ನಡೆಸಿ ತಮ್ಮ ಸರ್ವಸ್ವವನ್ನೂ ಸ್ವಾತಂತ್ರ್ಯ ಹೋರಾಟಕ್ಕೆ ಮುಡಿಪಾಗಿಟ್ಟು ಅಂತ್ಯ ಕಾಲದಲ್ಲಿ ಕಡು ಬಡವರಂತೆ ದಾರುಣವೇ ಎನ್ನಬಹುದಾಗಿ ಬದುಕಿದವರು. ಆದರೆ ಅವರ ಹೆಸರನ್ನು ಹೊತ್ತ ಬಡಾವಣೆಯು ಪ್ರತಿಷ್ಠಿತರ ನೆಲೆದಾಣವಾಗಿದ್ದು ಜನ ಸಾಮಾನ್ಯರು ಮುಟ್ಟಲಾರದ ಭೂಮಿಯ ಬೆಲೆ ಹೊತ್ತು ನಿಂತಿದೆ. ವೈಯಾಲಿಕಾವಲ್, ಬೆಂಗಳೂರು ಅರಮನೆ, ಮಲ್ಲೇಶ್ವರಂಗಳಿಂದ ಸುತ್ತುವರಿದ ಈ ಬಡಾವಣೆ ವಿಸ್ತ ...

                                               

ಕನ್ನಡದ ಕೋಟ್ಯಧಿಪತಿ

ಕನ್ನಡದ ಕೋಟ್ಯಧಿಪತಿ ಭಾರತೀಯ ಕನ್ನಡ ಭಾಷೆಯ ರಸಪ್ರಶ್ನೆ ಆಟದ ಕಾರ್ಯಕ್ರಮವಾಗಿದ್ದು, ಇದನ್ನು ಪುನೀತ್ ರಾಜ್‌ಕುಮಾರ್ ನಿರೂಪಣೆ ಮಾಡಿದ್ದಾರೆ. ಇದು ಅಂತರರಾಷ್ಟ್ರೀಯ ಖ್ಯಾತಿಯ ಸೋನಿ ಪಿಕ್ಚರ್ಸ್ ಟೆಲಿವಿಷನ್- ಪ್ರಸಿದ್ಧ ಗೇಮ್ ಶೋ ಹು ವಾಂಟ್ಸ್ ಟು ಬಿ ಅ ಮಿಲಿಯನೇರ್ ನ ಅಧಿಕೃತ ಕನ್ನಡ ಭಾಷಾ ರೂಪಾಂತರವಾಗಿದೆ. ಈ ಕಾರ್ಯಕ್ರಮದ ಮೊದಲ ಮೂರು ಸೀಸನ್ಗಳು ಸ್ಟಾರ್ ಸುವರ್ಣದಲ್ಲಿ ಪ್ರಸಾರ ಮಾಡಲಾಗುತ್ತಿತ್ತು. ಆದರೆ ನಾಲ್ಕನೇ ಸೀಸನ್ ಜೂನ್ 23, 2019 ರಿಂದ ಕಲರ್ಸ್ ಕನ್ನಡದಲ್ಲಿ ಪ್ರಾರಂಭವಾಯಿತು.

                                               

ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಭಾರತೀಯ ನಟಿ, ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ. ಇವರು ೨೦೧೬ ರ ಚಿತ್ರ ಕ್ರೇಜಿ ಬಾಯ್ ಮೂಲಕ ಖ್ಯಾತಿಗೆ ಏರಿದರು. ೨೦೧೬ ರಲ್ಲಿ, ಮಹೇಶ್ ಬಾಬು ನಿರ್ದೇಶಿಸಿದ ಚಿತ್ರದಲ್ಲಿ ದಿಲೀಪ್ ಪ್ರಕಾಶ್ ಎದುರು ಅಭಿನಯಿಸಿದ್ದಾರೆ. ಇವರು ಗುರುಗಳ ಜೊತೆಯಲ್ಲಿ ಗರುಡ ಚಲನಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ಇವರನ್ನು "ಕರ್ನಾಟಕ ಕ್ರಷ್" ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ.

ರಾಜ್‌ಕುಮಾರ್
                                     

ⓘ ರಾಜ್‌ಕುಮಾರ್

ಡಾ. ರಾಜ್‌ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆ ಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ.

                                     

1. ಜೀವನ

  • ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ.
  • ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು. ೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‌ನಿಂದ ಅಪಹರಣವಾಗಿದ್ದ ರಾಜ್‌ಕುಮಾರ್, ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು.
  • ನಟಸಾರ್ವಭೌಮ ಡಾ. ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು.
                                     

1.1. ಜೀವನ DR RAJKUMAR

ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ ೧೯೨೯ರ ಏಪ್ರಿಲ್ ೨೪ರಂದು ರಾಜ್‌ಕುಮಾರ್ ಹುಟ್ಟಿದರು. ನಾಮಕರಣಗೊಂಡ ಹೆಸರು ಮುತ್ತುರಾಜುಮುತ್ತಣ್ಣ. ಡಾ. ರಾಜ್ ಅವರಿಗೆ ವರದರಾಜ್ ಎಂಬ ಸಹೋದರರೂ, ಶಾರದಮ್ಮ ಎಂಬ ತಂಗಿಯೂ ಇದ್ದರು. ೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಲಗ್ನವಾಯಿತು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್‌ಕುಮಾರ್ ಎಂದೇ ಕನ್ನಡದ ಜನತೆಗೆ ಚಿರ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರಲ್ಲೊಬ್ಬರಾದರು. ವಜ್ರೇಶ್ವರಿ ಸಂಸ್ಥೆ ಯ ಅಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಡಾ. ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಜನ ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು. ಗಂಡು ಮಕ್ಕಳಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್‌ಕುಮಾರ್. ಒಟ್ಟು ಹನ್ನೆರಡು ಮೊಮ್ಮಕ್ಕಳಿದ್ದು, ಶಿವರಾಜ್‌ಕುಮಾರ್ ಪುತ್ರಿಯಾದ ನಿವೇದಿತಾ, ಅಂಡಮಾನ್ ಮುಂತಾದ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾಳೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಡಾ. ರಾಜ್ ಅವರ ಬೀಗರು. ಬಂಗಾರಪ್ಪನವರ ಪುತ್ರಿಯಾದ ಗೀತಾ, ಶಿವರಾಜ್‌ಕುಮಾರ್ ಅವರ ಪತ್ನಿ.

                                     

1.2. ಜೀವನ ಡಾ. ರಾಜ್ ಅಪಹರಣ

  • ಅಪಹರಣದ ಅವಧಿಯಲ್ಲಿ ಕರ್ನಾಟಕದ ಪೋಲಿಸ್ ಮಹಾನಿರ್ದೇಶಕರಾದಡಿಜಿಪಿ ಪಿ. ದಿನಕರ್ ಅವರು ಅಪಹರಣದ ಬಗ್ಗೆ "Veerappans Prize Catch: Dr.Rajkumar" ಎಂಬ ಪುಸ್ತಕವನ್ನು ಬರೆದಿದ್ದಾರೆ. ಆ ಪುಸ್ತಕವನ್ನು ರವಿ ಬೆಳಗೆರೆ ಯವರು "ರಾಜ ರಹಸ್ಯ" ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.
  • ೩೦ ಜುಲೈ ೨೦೦೦ರಂದು, ಕುಖ್ಯಾತ ದಂತಚೋರ, ನರಹಂತಕ ವೀರಪ್ಪನ್‌ನಿಂದ ಡಾ. ರಾಜ್ ಅವರು ಗಾಜನೂರಿನಲ್ಲಿರುವ ತಮ್ಮ ತೋಟದ ಮನೆಯಿಂದ ಅಪಹರಣವಾದರು. ಡಾ. ರಾಜ್ ಅವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿ ಅವರೂ ಕೂಡ ಅಪಹರಣಕ್ಕೊಳಗಾದರು.
  • ಅಪಹರಣದ ನಂತರದ ದಿನಗಳಲ್ಲಿ, ಕ್ಯಾಸೆಟ್ಟುಗಳ ಮೂಲಕ, ಪತ್ರಗಳ ಮೂಲಕ ಕರ್ನಾಟಕ ಹಾಗು ತಮಿಳುನಾಡು ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ವೀರಪ್ಪನ್ ಡಾ. ರಾಜ್ ಅವರನ್ನು ಒತ್ತೆಯಾಳಗಿಟ್ಟುಕೊಂಡು, ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದನು. ನೂರೆಂಟು ದಿನಗಳ ಕಾಲ ಅಪಹೃತರಾಗಿ, ಅರಣ್ಯವಾಸ ಅನುಭವಿಸಿದ್ದ ಡಾ. ರಾಜ್, ೧೫ ನವೆಂಬರ್ ೨೦೦೦ರಂದು ಬಿಡುಗಡೆಗೊಂಡರು.
                                     

1.3. ಜೀವನ ನಿಧನ

  • ಅಂತಿಮ ದಿನಗಳಲ್ಲಿ ಮಂಡಿನೋವು ಹಾಗು ಎದೆನೋವಿನಿಂದ ಬಳಲಿದ ಡಾ. ರಾಜ್, ೧೨ ಏಪ್ರಿಲ್, ೨೦೦೬ ಬುಧವಾರದಂದು ಮಧ್ಯಾಹ್ನ ೧:೪೫ರ ಸುಮಾರಿಗೆ, ಬೆಂಗಳೂರಿನಲ್ಲಿ ತಮ್ಮ ಕೊನೆಯುಸಿರೆಳೆದರು. ಕನ್ನಡ ಚಿತ್ರರಂಗದ ದಂತಕಥೆಯಾಗಿದ್ದ ಡಾ. ರಾಜ್ ಅವರ ಅಗಲಿಕೆಯಿಂದ, ಒಂದು ಸುವರ್ಣ ಯುಗದ ಅಂತ್ಯವಾದಂತಾಯಿತು.
  • ಡಾ. ರಾಜ್ ಅವರ ಸ್ವ-ಇಚ್ಛೆಯಂತೆ, ಮರಣೋತ್ತರವಾಗಿ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಮೃತರ ಪಾರ್ಥಿವ ಶರೀರವನ್ನು ಅಭಿಮಾನಿಗಳ, ಬಂಧುಮಿತ್ರರ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿತ್ತು. ಅಪಾರ ಸಂಖ್ಯೆಯ ಜನಸ್ತೋಮ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿತ್ತು.
  • ೧೩ ಏಪ್ರಿಲ್ ೨೦೦೬ರಂದು, ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ. ರಾಜ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ನಡೆಯಿತು. ಇವೆರಡು ದಿನ ಏಪ್ರಿಲ್ ೧೨ ಮತ್ತು ೧೩, ಬೆಂಗಳೂರಿನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿತ್ತು.
                                     

2. ಬಣ್ಣದ ಬದುಕು

ಅವರ ನಟನೆಯ ಐತಿಹಾಸಿಕ ಚಿತ್ರಗಳು

  • ಶ್ರೀ ಕೃಷ್ಣದೇವರಾಯ
  • ಕವಿರತ್ನ ಕಾಳಿದಾಸ
  • ಇಮ್ಮಡಿ ಪುಲಿಕೇಶಿ
  • ರಣಧೀರ ಕಂಠೀರವ
  • ಕಿತ್ತೂರು ಚೆನ್ನಮ್ಮ
  • ವೀರ ಕೇಸರಿ
  • ಮಯೂರ
  • ಬಭ್ರುವಾಹನ

ಭಕ್ತನ ಪಾತ್ರದಲ್ಲಿ

  • ಭಕ್ತ ಕನಕದಾಸ
  • ಸಂತ ತುಕಾರಾಮ
  • ಹರಿಭಕ್ತ
  • ನವಕೋಟಿ ನಾರಾಯಣ ಭಕ್ತ ಪುರಂದರದಾಸ
  • ಭಕ್ತ ಕುಂಬಾರ
  • ಭೂಕೈಲಾಸ
  • ಭಕ್ತ ವಿಜಯ
  • ಸರ್ವಜ್ಞಮೂರ್ತಿ
  • ಭಕ್ತ ಚೇತ
  • ಮಹಾತ್ಮ ಕಬೀರ್
  • ವಾಲ್ಮೀಕಿ

ದೇವರ ಪಾತ್ರದಲ್ಲಿ

  • ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮ
  • ಮಂತ್ರಾಲಯ ಮಹಾತ್ಮೆ
  • ಶ್ರೀ ರಾಮಾಂಜನೇಯ ಯುದ್ಧ
  • ಶ್ರೀ ಶ್ರೀನಿವಾಸ ಕಲ್ಯಾಣ
  • ಶಿವ ಮೆಚ್ಚಿದ ಕಣ್ಣಪ್ಪ
  • ಕೃಷ್ಣ ಗಾರುಡಿ
  • ಮೂರೂವರೆ ವಜ್ರಗಳು

ಡಾ. ರಾಜ್ ಅತಿಥಿನಟನಾಗಿ ಕಾಣಿಸಿಕೊಂಡ ಚಿತ್ರಗಳು

  • ಶ್ರೀ ಶ್ರೀನಿವಾಸ ಕಲ್ಯಾಣ ೧೯೫೨
  • ಶಿವ ಮೆಚ್ಚಿದ ಕಣ್ಣಪ್ಪ
  • ಗಂಧದಗುಡಿ ಭಾಗ ೨
  • ಭಕ್ತ ಪ್ರಹ್ಲಾದ ೧೯೪೨
  • ನಾಡಿನ ಭಾಗ್ಯ
  • ಜೋಗಿ
  • ಭಾಗ್ಯವಂತ


                                     

2.1. ಬಣ್ಣದ ಬದುಕು ರಂಗಭೂಮಿ ಮತ್ತು ತಂದೆಯ ಪ್ರಭಾವ

  • ಗುಬ್ಬಿ ಕಂಪನಿಯೇ ವಿಶ್ವವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತು ರಾಜ್‌ಗೆ ಅವರಿಂದಲೇ ತರಬೇತಿಯಾಯಿತು. ನಾಟಕಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿರ್ವಹಿಸುತ್ತಿದ್ದರು. ಡಾ. ರಾಜ್‌ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ.ಫಾಲ್ಕೆ ಪ್ರಶಸ್ತಿ ಪ್ರಕಟವಾದಾಗ ಅವರು ಮೊದಲು ನೆನಪಿಸಿಕೊಂಡದ್ದು ತಂದೆ ಹೇಳಿದ ಮಾತುಗಳನ್ನೇ:"ಇಂತಹ ಸಾಧನೆ ನಿನ್ನಿಂದ ಸಾಧ್ಯ" ಎಂದು ಪುಟ್ಟಸ್ವಾಮಯ್ಯ ಮಗನ ಭವಿಷ್ಯವನ್ನು ಅಂದೇ ನುಡಿದಿದ್ದರು. ಅದು ನಿಜವಾಯಿತು.
  • ಅನಂತರ "ಕುರುಕ್ಷೇತ್ರ" ನಾಟಕದಲ್ಲಿ ತಂದೆ ಭೀಮನ ಪಾತ್ರವಾದರೆ ಮಗ ಅರ್ಜುನನ ಪಾತ್ರ. ರಾಜ್‌ಕುಮಾರ್‌ಗೆ ಇದು ರಂಗ ತಾಲೀಮು. ೧೯೫೧ರಲ್ಲಿ ತಂದೆ ಪುಟ್ಟಸ್ವಾಮಯ್ಯನವರ ನಿಧನ. ಬಂದೆರಗಿದ ಅಘಾತದಿಂದ ತತ್ತರಿಸಿದ ಮುತ್ತುರಾಜ್, ಮತ್ತೆ ಗುಬ್ಬಿ ಕಂಪನಿ ಸೇರಿ "ಭೂ ಕೈಲಾಸ" ನಾಟಕದಲ್ಲಿ ಅಭಿನಯಿಸಿದರು. ಗುಬ್ಬಿ ಕಂಪನಿ ಅಲ್ಲದೆ, ಶ್ರೀ ಸಾಹಿತ್ಯ ಮಂಡಲಿ, ಶೇಷಾಚಾರ್ಯರ ಶೇಷಕಮಲ ನಾಟಕ ಮಂಡಳಿ ಯಲ್ಲಿಯೂ ರಾಜ್‌ಕುಮಾರ್ ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ.
  • "ನನ್ನ ತಂದೆ ರಂಗದ ಮೇಲೆ ಹುರಿ ಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂತಹವರಿಗೂ ಒಂದು ಬಾರಿ ನಡುಕ ಬರುತ್ತಿತ್ತು" ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್‌ಕುಮಾರ್ ಅವರಿಗೆ ತಂದೆಯ ಅಭಿನಯ ಬಲುಪ್ರಿಯ. "ನಾನೂ ಅದೇ ರೀತಿ ಮಾಡಬೇಕೆಂದು ಭಕ್ತ ಪ್ರಹ್ಲಾದ ಚಿತ್ರದಲ್ಲಿ ಹಿರಣ್ಯ ಕಶಿಪು ಪಾತ್ರದಲ್ಲಿ ಅವರಂತೆ ಅಭಿನಯಿಸಲು ಸಾಧ್ಯವೇ ಎಂದು ಪ್ರಯತ್ನಿಸಿದೆ; ಆದರೆ ಬರಲಿಲ್ಲ" ಎಂದು ಹೇಳಿದ್ದಾರೆ.
  • ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮುನ್ನ ಡಾ. ರಾಜ್ ಅವರ ಹೆಸರು ಮುತ್ತುರಾಜ ಎಂದಿತ್ತು. ಮುತ್ತುರಾಜನ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ರವರು ಎಂದರೆ ೧೯೩೦-೧೯೫೦ ಕಾಲದಲ್ಲಿ ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯರವರು ಗುಬ್ಬಿ ಕಂಪನಿಯಲ್ಲಿ ಕಲಾವಿದರಾಗಿದ್ದರು. ಬಡತನದಿಂದಾಗಿ ಮುತ್ತುರಾಜ್ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತು.
  • ಗುಬ್ಬಿ ಕಂಪನಿಯಲ್ಲಿ ಪುಟ್ಟಸ್ವಾಮಯ್ಯನವರು ಅಭಿನಯಿಸುತ್ತಿದ್ದಾಗ ಮುತ್ತುರಾಜುವಿಗೆ "ಕೃಷ್ಣಲೀಲಾ" ಎಂಬ ನಾಟಕದಲ್ಲಿ ಸಣ್ಣ ಪಾತ್ರ ದೊರಕಿತು. ಕೆಲ ದಿನಗಳ ನಂತರ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿ ತೊರೆದು ಎಂ.ವಿ.ಸುಬ್ಬಯ್ಯ ನಾಯ್ಡು ಅವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಮಂಡಳಿ ಗೆ ಸೇರಿದಾಗ ಅಕಸ್ಮಾತ್ತಾಗಿ ಮುತ್ತುರಾಜ್‌ಗೆ "ಅಂಬರೀಷ" ನಾಟಕದಲ್ಲಿ ಅಂಬರೀಷನ ತಮ್ಮ ರಮಾಕಾಂತನ ಪಾತ್ರ ದೊರಕಿತು.


                                     

2.2. ಬಣ್ಣದ ಬದುಕು ಬಣ್ಣದ ಬದುಕಿನ ಪಕ್ಷಿನೋಟ

  • ಸುಮಾರು ೨೦೬ ಚಿತ್ರಗಳಲ್ಲಿ ನಾಯಕನಟರಾಗಿ ನಟಿಸಿರುವ ರಾಜ್ ಕುಮಾರ್ ಬೆರಳೆಣಿಕೆಯ ರಿಮೇಕ್ ಚಿತ್ರಗಳಲ್ಲಿ ನಟಿಸಿದ್ದಾರೆ. ಅವೆಂದರೆ "ಅಣ್ಣ ತಂಗಿ", "ಮುರಿಯದ ಮನೆ", "ವಾತ್ಸಲ್ಯ", "ಮನಸಾಕ್ಷಿ", "ಬಾಳ ಬಂಧನ", "ನನ್ನ ತಮ್ಮ", "ಭಾಗ್ಯವಂತರು", "ಅಪೂರ್ವ ಸಂಗಮ" ಮುಂತಾದವುಗಳು. ಅಲ್ಲಿಯೂ ಅವರು ಮೂಲ ನಟರನ್ನು ಅನುಕರಿಸದೆ ತಮ್ಮದೇ ಶೈಲಿಯಲ್ಲಿ ಅಭಿನಯಿಸಿದ್ದಾರೆ. "ಬೇಡರ ಕಣ್ಣಪ್ಪ" ತೆಲುಗಿನಲ್ಲಿ ‘ಶ್ರೀ ಕಾಳಹಸ್ತಿ ಮಹಾತ್ಮಂ’ ಎಂಬ ಹೆಸರಲ್ಲಿ ತಯಾರಾಯಿತು. ಅದರಲ್ಲಿ ಕೂಡ ಡಾ. ರಾಜ್ ಕುಮಾರ್ ಹೀರೊ ಆಗಿ ನಟಿಸಿದರು. ಇದು ಬೇರೆ ಭಾಷೆಯಲ್ಲಿ ರಾಜ್ ಕುಮಾರ್ ನಟಿಸಿದ ಏಕೈಕ ಚಿತ್ರ.
  • ೧೯೮೩ರಲ್ಲಿ ಬಂದಂತಹ ಕವಿರತ್ನ ಕಾಳಿದಾಸ, ಡಾ. ರಾಜ್ ಅವರ ಕಲಾ ನೈಪುಣ್ಯಕ್ಕೆ ಓರೆ ಹಚ್ಚಿದ ಚಿತ್ರ. ಈ ಚಿತ್ರದಲ್ಲಿ ಅವಿದ್ಯಾವಂತ ಕುರುಬನಾಗಿಯೂ, ಮಹಾಕವಿಯಾದ ಕಾಳಿದಾಸನಾಗಿಯೂ, ದುಷ್ಯಂತ ಮಹಾರಾಜನಾಗಿಯೂ ವಿವಿಧ ಪಾತ್ರಗಳಿಗೆ ರಾಜ್ ಜೀವ ತುಂಬಿದ್ದಾರೆ. ಈ ಚಿತ್ರವು ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲೊಂದಾಗಿಸುವಲ್ಲಿ ಡಾ. ರಾಜ್ ಅಮೋಘ ಅಭಿನಯದ ಕೊಡುಗೆ ಮುಖ್ಯವಾದುದೆಂದು ವಿಮರ್ಶಕರ ಅಭಿಪ್ರಾಯ.
  • ರಾಜ್‌ಕುಮಾರ್ ಅವರನ್ನು ಖ್ಯಾತಿಯ ಉತ್ತುಂಗಕ್ಕೇರಿಸಿದ ಚಿತ್ರ ೧೯೭೧ರಲ್ಲಿ ತೆರೆಕಂಡ ಬಂಗಾರದ ಮನುಷ್ಯ. ಚಿತ್ರಮಂದಿರದಲ್ಲಿ ಸತತವಾಗಿ ಎರಡು ವರ್ಷಕ್ಕೂ ಹೆಚ್ಚಿನ ಅವಧಿಯ ಪ್ರದರ್ಶನಗೊಂಡು ಹೊಸ ದಾಖಲೆಯನ್ನು ನಿರ್ಮಿಸಿತು. ಈ ದಾಖಲೆ ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಅಚ್ಚಳಿಯದೇ ನಿಂತಿದೆ. ಈ ಚಿತ್ರದಲ್ಲಿನ ರಾಜ್ ಅಭಿನಯದ ರಾಜೀವಪ್ಪ ಎಂಬ ಪಾತ್ರವು ಕನ್ನಡ ಚಿತ್ರರಂಗದಲ್ಲಿನ ಅತ್ಯಂತ ಖ್ಯಾತ ಪಾತ್ರಗಳಲ್ಲಿ ಒಂದಾಗಿ ಹೆಸರು ಪಡೆಯಿತು.
  • ೧೯೬೮ರಲ್ಲಿ ಬಿಡುಗಡೆಯಾದ ಜೇಡರ ಬಲೆ ಎಂಬ ಚಿತ್ರದ ಮೂಲಕ ಜೇಮ್ಸ್ ಬಾಂಡ್ ಮಾದರಿಯ ಗೂಢಚಾರಿ ಪಾತ್ರವನ್ನಾಧರಿಸಿದ ಚಿತ್ರಸರಣಿಗೆ ನಾಂದಿ ಹಾಡಿದರು. ಈ ಸರಣಿ ಯಲ್ಲಿ ಪ್ರಕಾಶ್ ಎಂಬ ಏಜೆಂಟ್ ಹೆಸರಿನಲ್ಲಿ ಏಜೆಂಟ್ ೯೯೯ ಅಭಿನಯಿಸಿದರು. ಈ ಸರಣಿಯಲ್ಲಿನ ಇತರ ಚಿತ್ರಗಳು ಆಪರೇಷನ್ ಜಾಕ್‌ಪಾಟ್‌ನಲ್ಲಿ ಸಿ.ಐ.ಡಿ. ೯೯೯, ಗೋವಾದಲ್ಲಿ ಸಿ.ಐ.ಡಿ. ೯೯೯ ಹಾಗು ಆಪರೇಷನ್ ಡೈಮಂಡ್ ರಾಕೆಟ್. ಇವಲ್ಲದೇ ಸಿ.ಐ.ಡಿ. ರಾಜಣ್ಣ ಚಿತ್ರದಲ್ಲಿ ಸಿ.ಐ.ಡಿ ಆಗಿ ರಾಜ್ ಅಭಿನಯಿಸಿದ್ದಾರೆ.
  • ಇದೇ ವರ್ಷ ತೆರೆಕಂಡ ಮಂತ್ರಾಲಯ ಮಹಾತ್ಮೆ ಚಿತ್ರದಲ್ಲಿ ರಾಜ್‌ಕುಮಾರ್ ಶ್ರೀ ರಾಘವೇಂದ್ರ ಸ್ವಾಮಿಗಳ ಪಾತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿನ ಅಭಿನಯ ತಮ್ಮ ಚಿತ್ರ ಬದುಕಿನಲ್ಲಿ ಮಿಕ್ಕೆಲ್ಲ ಚಿತ್ರಗಳಿಗಿಂತಲೂ ಹೆಚ್ಚು ತೃಪ್ತಿಕರ ಎಂದು ಹಲವಾರು ಬಾರಿ ಸಂದರ್ಶನಗಳಲ್ಲಿ ತಿಳಿಸಿದ್ದಾರೆ.
  • ೧೯೬೬ರಲ್ಲಿ ಬಿಡುಗಡೆಯಾದ ಸಂಗೀತ ಪ್ರಧಾನ ಸಂಧ್ಯಾರಾಗ ಚಿತ್ರದಲ್ಲಿ ಶಾಸ್ತ್ರೀಯ ಸಂಗೀತಗಾರನಾಗಿ ನಟಿಸಿದ ರಾಜ್ ಅವರ ಅಭಿನಯಕ್ಕೆ ಭಾರತದ ಹೆಸರಾಂತ ಶಾಸ್ತ್ರೀಯ ಗಾಯಕರಾದ ಡಾ.ಬಾಲಮುರಳಿ ಕೃಷ್ಣ ಹಾಗು ಪಂಡಿತ್ ಭೀಮಸೇನ ಜೋಷಿ ಅವರು ಹಾಡಿದ್ದಾರೆ.
  • ಬೆಳ್ಳಿತೆರೆಯ ಮೇಲೆ ಡಾ. ರಾಜ್ ಅವರು ಕಡೆಯದಾಗಿ ಕಾಣಿಸಿಕೊಂಡ ಚಿತ್ರ ತಮ್ಮ ಪುತ್ರ ಶಿವರಾಜ್‌ಕುಮಾರ್ ನಾಯಕತ್ವದಲ್ಲಿನ ಜೋಗಿ. ಚಿತ್ರದ ಆರಂಭದ ದೃಶ್ಯದಲ್ಲಿ ನಾಯಕನ ಜೋಳಿಗೆಗೆ ಅಕ್ಕಿಯನ್ನು ಅರ್ಪಿಸಿ, ಆಶೀರ್ವದಿಸುತ್ತಾರೆ.
  • ರಾಜ್‌ಕುಮಾರ್ ಅವರ ನೂರೈವತ್ತನೇ ಚಿತ್ರ, ೧೯೭೩ರಲ್ಲಿ ತೆರೆಕಂಡ, ಗಂಧದ ಗುಡಿ. ರಾಜ್ ಅರಣ್ಯಾಧಿಕಾರಿಯ ಪಾತ್ರದಲ್ಲಿ ನಟಿಸಿದ ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟರಾದ ವಿಷ್ಣುವರ್ಧನ್ ಅಭಿನಯಿಸಿದ್ದಾರೆ. ೧೯೭೪ರಲ್ಲಿ ತೆರೆಕಂಡ ಭಕ್ತ ಕುಂಬಾರ ಚಿತ್ರದಲ್ಲಿನ ರಾಜ್ ಅಭಿನಯ ಮನೋಜ್ಞ ಮತ್ತು ಅತ್ಯಂತ ಭಾವಪೂರ್ಣ ಎಂದು ವಿಮರ್ಶಕರ ಅಭಿಪ್ರಾಯ.
  • ೧೯೬೦ರ ದಶಕದಲ್ಲಿ, ಕಣ್ತೆರೆದು ನೋಡು, ಗಾಳಿಗೋಪುರ, ನಂದಾದೀಪ, ಸಾಕು ಮಗಳು, ನಾಂದಿ ಮುಂತಾದ ಸಾಮಾಜಿಕ ಚಿತ್ರಗಳಲ್ಲಿಯೂ, ರಣಧೀರ ಕಂಠೀರವ, ಕಿತ್ತೂರು ಚೆನ್ನಮ್ಮ, ಇಮ್ಮಡಿ ಪುಲಿಕೇಶಿ, ಶ್ರೀ ಕೃಷ್ಣದೇವ ರಾಯ ಮುಂತಾದ ಐತಿಹಾಸಿಕ ಚಿತ್ರಗಳು ರಾಜ್ ಅಭಿನಯದಲ್ಲಿ ತೆರೆ ಕಂಡವು.
  • ಇದೇ ವರ್ಷ ಬಿಡುಗಡೆ ಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ, ಊರೇ ಹೋರಾಡಲಿ ಹಾಡಿನ ಮೂಲಕ ರಾಜ್ ಹಿನ್ನೆಲೆ ಗಾಯಕರಾಗಿ ತಮ್ಮ ಮುಂದಿನ ಎಲ್ಲಾ ಚಿತ್ರಗಳಲ್ಲೂ ಹಾಡಲು ಪ್ರಾರಂಭಿಸಿದರು.
  • ಜೀವನ ಚೈತ್ರ ಚಿತ್ರದ ಮೂಲಕ ಸಾರಾಯಿ ಪಿಡುಗಿನ ವಿರುದ್ಧ, ಆಕಸ್ಮಿಕ ಚಿತ್ರದ ಮೂಲಕ ಹೆಣ್ಣಿನ ಶೋಷಣೆಯ ವಿರುದ್ಧ, ಶಬ್ದವೇಧಿ ಚಿತ್ರದ ಮೂಲಕ ಮಾದಕ ವ್ಯಸನಗಳ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ. ರಾಜ್ ಅಭಿನಯಿಸಿದರು. ಡಾ. ರಾಜ್‌ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ವರ್ಷ ೨೦೦೦ರಲ್ಲಿ ತೆರೆಕಂಡ ಶಬ್ದವೇದಿ.
  • ೧೯೭೫ರಲ್ಲಿ ಬಿಡುಗಡೆಯಾದ ಮಯೂರ ಚಲನಚಿತ್ರವು ಕನ್ನಡದ ಪ್ರಥಮ ದೊರೆ ಕದಂಬರ ಮಯೂರವರ್ಮರನ್ನಾಧರಿಸಿದೆ. ಈ ಚಿತ್ರದಲ್ಲಿರುವ ನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ ಗೀತೆಯು ರಾಜ್ ಗಾಯನದಲ್ಲಿನ ಅತ್ಯಂತ ಜನಪ್ರಿಯ ಗೀತೆಗಳಲ್ಲೊಂದು.
  • ರಾಜ್‌ಕುಮಾರ್ ಅವರ ನೂರನೇ ಚಿತ್ರವಾದ ಭಾಗ್ಯದ ಬಾಗಿಲು ೧೯೬೮ರಲ್ಲಿ ತೆರೆ ಕಂಡಿತು. ಇದೇ ಸಂದರ್ಭದಲ್ಲಿ ಇವರಿಗೆ ನಟಸಾರ್ವಭೌಮ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತಲ್ಲದೆ, ಅದೇ ಹೆಸರಿನ ಚಲನಚಿತ್ರವೂ ನಟಸಾರ್ವಭೌಮ ಕೂಡ ತಯಾರಾಯಿತು. ಈ ಚಿತ್ರವು ರಾಜ್‌ಕುಮಾರ್ ಅವರ ಹಿಂದಿನ ನೂರು ಚಿತ್ರಗಳ ತುಣುಕು ದೃಶ್ಯಗಳನ್ನು ಜೊತೆಗೂಡಿಸಿ ತಯಾರಿಸುವ ಯೋಜನೆಯೊಂದಿಗೆ ಪ್ರಾರಂಭವಾದರೂ, ಸ್ಥಳಾವಕಾಶದ ಕೊರತೆಯಿಂದ ಕೆಲವು ಚಿತ್ರಗಳ ತುಣುಕುಗಳನ್ನು ಕೈಬಿಡಲಾಗಿದೆ.
  • ೧೯೭೧ರಲ್ಲಿ ಬಿಡುಗಡೆಯಾದ ಕಸ್ತೂರಿ ನಿವಾಸ ಮತ್ತು ಸಾಕ್ಷಾತ್ಕಾರ ಚಿತ್ರಗಳು ರಾಜ್ ಅವರ ಜನಪ್ರಿಯ ಚಿತ್ರಗಳಲ್ಲಿ ಮುಖ್ಯವಾದವು. ಈ ಚಿತ್ರಗಳಲ್ಲಿನ ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು ಹಾಗು ಒಲವೆ ಜೀವನ ಸಾಕ್ಷಾತ್ಕಾರ ಹಾಡುಗಳು ಜನಮನಗಳಲ್ಲಿ ವಿಶೇಷ ಸ್ಥಾನ ಪಡೆದ ಗೀತೆಗಳಾಗಿವೆ.
  • ೧೯೮೦ರ ದಶಕದಲ್ಲಿ ಸದಭಿರುಚಿಯ ಸಾಮಾಜಿಕ ಚಿತ್ರಗಳಾದ ಹಾಲುಜೇನು, ಚಲಿಸುವ ಮೋಡಗಳು, ಹೊಸ ಬೆಳಕು, ಶ್ರಾವಣ ಬಂತು, ಅನುರಾಗ ಅರಳಿತು, ಶ್ರುತಿ ಸೇರಿದಾಗ ಮುಂತಾದ ಯಶಸ್ವಿ ಚಿತ್ರಗಳು ತೆರೆ ಕಂಡವು. ಇದೇ ಅವಧಿಯಲ್ಲಿ ಡಾ. ರಾಜ್ ಅವರು ಅನಂತ್ ನಾಗ್ ಅವರೊಂದಿಗೆ ಕಾಮನಬಿಲ್ಲು ಚಿತ್ರದಲ್ಲಿಯೂ, ಶಂಕರ್ ನಾಗ್ ಅವರೊಂದಿಗೆ ಅಪೂರ್ವ ಸಂಗಮ ಚಿತ್ರದಲ್ಲಿಯೂ ಅಭಿನಯಿಸಿದರು.
  • ಶಂಕರ್ ನಾಗ್ ನಿರ್ದೇಶನದ ಕೆಲವೇ ಚಿತ್ರಗಳಲ್ಲಿ ಒಂದಾದ ಒಂದು ಮುತ್ತಿನ ಕಥೆ ಚಿತ್ರದಲ್ಲಿ ಡಾ. ರಾಜ್ ನಟಿಸಿದ್ದಾರೆ. ತಮ್ಮ ಯೋಗಾಸನಗಳಿಗೆ ಹೆಸರಾಗಿದ್ದ ಡಾ. ರಾಜ್ ಅವರ ವಿವಿಧ ಯೋಗಾಸನಗಳ ಭಂಗಿಗಳು ಕಾಮನಬಿಲ್ಲು ಚಿತ್ರದ ಮೂಲಕ ಬೆಳ್ಳಿತೆರೆಯ ಮೇಲೂ ಮೂಡಿಬಂದಿದೆ.
  • ೧೯೭೭ರಲ್ಲಿ ಬಂದಂತಹ ಸನಾದಿ ಅಪ್ಪಣ್ಣ ಚಿತ್ರದಲ್ಲಿ, ಡಾ. ರಾಜ್ ಶಹನಾಯಿ ವಾದಕರಾಗಿ ಅಭಿನಯಿಸಿದರು. ಈ ಚಿತ್ರಕ್ಕೆ ಅವಶ್ಯಕವಾಗಿದ್ದ ಶಹನಾಯಿ ವಾದನವನ್ನು ನುಡಿಸಿದವರು ಭಾರತದ ಪ್ರಖ್ಯಾತ ಶಹನಾಯಿ ವಾದಕರಾದ ಉಸ್ತಾದ್ ಬಿಸ್ಮಿಲ್ಲಾ ಖಾನ್. ಜಿ.ಕೆ.ವೆಂಕಟೇಶ್ ಸಂಗೀತದಲ್ಲಿ ಎಸ್.ಜಾನಕಿಯವರು ಹಾಡಿರುವ ಕರೆದರೂ ಕೇಳದೆ ಎಂಬ ಹಾಡಿನಲ್ಲಿ ಬರುವ ಬಿಸ್ಮಿಲ್ಲಾ ಖಾನರ ಶಹನಾಯಿ ವಾದನಕ್ಕೆ ಡಾ. ರಾಜ್ ಅಭಿನಯಿಸಿದ್ದಾರೆ.
  • ಬೇಡರ ಕಣ್ಣಪ್ಪ ಚಿತ್ರದಿಂದ ನಾಯಕ ನಟನಾಗಿ ಅಭಿನಯಿಸಲು ಪ್ರಾರಂಭಿಸಿದ ರಾಜಕುಮಾರ್, ಭಕ್ತ ವಿಜಯ, ಹರಿಭಕ್ತ, ಓಹಿಲೇಶ್ವರ, ಭೂಕೈಲಾಸ, ಭಕ್ತ ಕನಕದಾಸ, ನವಕೋಟಿ ನಾರಾಯಣಭಕ್ತ ಪುರಂದರದಾಸ ಮುಂತಾದ ಭಕ್ತಿ ಪ್ರಧಾನ ಚಿತ್ರಗಳಲ್ಲಿ ಅಭಿನಯಿಸಿದರು. ೨೦೦ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ ಕನ್ನಡದ ಏಕೈಕ ಕಲಾವಿದರು.
  • ಡಾ. ರಾಜ್ ಅವರ ಇನ್ನೂರನೇ ಚಿತ್ರವು ೧೯೮೮ರಲ್ಲಿ ತೆರೆಕಂಡ ದೇವತಾ ಮನುಷ್ಯ. ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಟಿಯರೊಲ್ಲೊಬ್ಬರಾದ ಸುಧಾರಾಣಿ ಯವರು ಡಾ. ರಾಜ್ ಅವರ ಪುತ್ರಿಯಾಗಿ ನಟಿಸಿದ್ದಾರೆ. ಕನ್ನಡದ ಮತ್ತೊಬ್ಬ ಜನಪ್ರಿಯ ನಾಯಕ ನಟರಾದ ಅಂಬರೀಶ್ ಅವರ ಸಹೋದರನಾಗಿ ಒಡಹುಟ್ಟಿದವರು ಚಿತ್ರದಲ್ಲಿ ಅಭಿನಯಿಸಿದ ಡಾ. ರಾಜ್, ಸಾಮಾಜಿಕ ಕಳಕಳಿಯ ಚಿತ್ರಗಳತ್ತ ಒಲವು ತೋರಿದ್ದರು.
  • ಭಕ್ತ ಅಂಬರೀಶ ಎಂಬ ಚಿತ್ರದಲ್ಲಿ ನಟಿಸಬೇಕೆಂಬ ಹಂಬಲವನ್ನು ರಾಜ್ ಹಲವಾರು ಬಾರಿ ವ್ಯಕ್ತಪಡಿಸಿದ್ದರಾದರೂ ಅನಾರೋಗ್ಯದ ಕಾರಣ ಅದು ಸಾಧ್ಯವಾಗಲಿಲ್ಲ.
  • ೧೯೭೬ರಲ್ಲಿ ಮೈಸೂರು ವಿಶ್ವವಿದ್ಯಾಲವು ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿತು.
  • ಡಾ. ರಾಜ್ ಕುಮಾರ್ ಅವರು ಅಂದಿನ ಬಹುತೇಕ ಎಲ್ಲ ಜನಪ್ರಿಯ ನಾಯಕಿಯರೊಂದಿಗೆ ನಟಿಸಿದ್ದಾರೆ. ಎಂ.ವಿ.ರಾಜಮ್ಮ, ಪಂಡರೀಬಾಯಿ, ಪ್ರತಿಮಾದೇವಿ, ಹರಿಣಿ, ಸಾಹುಕಾರ್ ಜಾನಕಿ, ಕೃಷ್ಣಕುಮಾರಿ, ರಾಜಸುಲೋಚನ, ಬಿ.ಸರೋಜದೇವಿ, ಸಂಧ್ಯಾ,ಆದವಾನಿ ಲಕ್ಷ್ಮಿ ದೇವಿ, ಮೈನಾವತಿ, ಲೀಲಾವತಿ, ಜಯಂತಿ, ಭಾರತಿ, ಕಲ್ಪನಾ, ವಂದನಾ, ಚಂದ್ರಕಲಾ, ಉದಯಚಂದ್ರಿಕಾ, ಬಿ.ವಿ.ರಾಧ, ಶೈಲಶ್ರೀ, ರಾಜಶ್ರೀ, ಆರತಿ, ಮಂಜುಳಾ, ಲಕ್ಷ್ಮಿ, ರೇಖಾ, ಜಯಮಾಲಾ, ಜಯಪ್ರದಾ, ಗಾಯತ್ರಿ, ಸರಿತಾ, ಜಯಚಿತ್ರಾ, ಕಾಂಚನಾ, ವಾಣಿಶ್ರೀ, ಜಿ.ವಿ.ಲತಾ, ಮಾಧವಿ, ಗೀತಾ, ಅಂಬಿಕಾ, ರೂಪಾದೇವಿ, ಊರ್ವಶಿ ಮುಂತಾದವರೊಂದಿಗೆ ನಟಿಸಿದ್ದಾರೆ. ರಾಜ್-ಭಾರತಿ, ರಾಜ್-ಲೀಲಾವತಿ, ರಾಜ್-ಜಯಂತಿ, ರಾಜ್-ಕಲ್ಪನಾ ಜೋಡಿ ಆ ಕಾಲದಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿತ್ತು.
                                     

2.3. ಬಣ್ಣದ ಬದುಕು ಅವರ ನಟನೆಯ ಐತಿಹಾಸಿಕ ಚಿತ್ರಗಳು

  • ಶ್ರೀ ಕೃಷ್ಣದೇವರಾಯ
  • ಕವಿರತ್ನ ಕಾಳಿದಾಸ
  • ಇಮ್ಮಡಿ ಪುಲಿಕೇಶಿ
  • ರಣಧೀರ ಕಂಠೀರವ
  • ಕಿತ್ತೂರು ಚೆನ್ನಮ್ಮ
  • ವೀರ ಕೇಸರಿ
  • ಮಯೂರ
  • ಬಭ್ರುವಾಹನ
                                     

2.4. ಬಣ್ಣದ ಬದುಕು ಭಕ್ತನ ಪಾತ್ರದಲ್ಲಿ

  • ಭಕ್ತ ಕನಕದಾಸ
  • ಸಂತ ತುಕಾರಾಮ
  • ಹರಿಭಕ್ತ
  • ನವಕೋಟಿ ನಾರಾಯಣ ಭಕ್ತ ಪುರಂದರದಾಸ
  • ಭಕ್ತ ಕುಂಬಾರ
  • ಭೂಕೈಲಾಸ
  • ಭಕ್ತ ವಿಜಯ
  • ಸರ್ವಜ್ಞಮೂರ್ತಿ
  • ಭಕ್ತ ಚೇತ
  • ಮಹಾತ್ಮ ಕಬೀರ್
  • ವಾಲ್ಮೀಕಿ
                                     

2.5. ಬಣ್ಣದ ಬದುಕು ದೇವರ ಪಾತ್ರದಲ್ಲಿ

  • ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮ
  • ಮಂತ್ರಾಲಯ ಮಹಾತ್ಮೆ
  • ಶ್ರೀ ರಾಮಾಂಜನೇಯ ಯುದ್ಧ
  • ಶ್ರೀ ಶ್ರೀನಿವಾಸ ಕಲ್ಯಾಣ
  • ಶಿವ ಮೆಚ್ಚಿದ ಕಣ್ಣಪ್ಪ
  • ಕೃಷ್ಣ ಗಾರುಡಿ
  • ಮೂರೂವರೆ ವಜ್ರಗಳು
                                     

2.6. ಬಣ್ಣದ ಬದುಕು ಪತ್ತೇದಾರ/ಗೂಢಚಾರಿ ಪಾತ್ರದಲ್ಲಿ

  • ಸಿ.ಐ.ಡಿ. ರಾಜಣ್ಣ
  • ಆಪರೇಷನ್ ಡೈಮಂಡ್ ರಾಕೆಟ್ ಚಿತ್ರಗಳು ಜೇಮ್ಸ್‌ಬಾಂಡ್ ಮಾದರಿಯಲ್ಲಿ ಬಂದಂತಹ ಸರಣಿ ಚಲನಚಿತ್ರಗಳು. ಈ ನಾಲ್ಕೂ ಚಿತ್ರಗಳಲ್ಲಿ ಪ್ರಕಾಶ್ ಎಂಬ ಹೆಸರಿನ ಸಿ.ಐ.ಡಿ ೯೯೯ ಪಾತ್ರದಲ್ಲಿ ಡಾ. ರಾಜ್ ಅಭಿನಯಿಸಿದ್ದಾರೆ.
  • ಆಪರೇಷನ್ ಜಾಕ್‍ಪಾಟ್‍ನಲ್ಲಿ ಸಿ.ಐ.ಡಿ. ೯೯೯,
  • ಬೆಂಗಳೂರು ಮೈಲ್
  • ಗೋವಾದಲ್ಲಿ ಸಿ.ಐ.ಡಿ. ೯೯೯
  • ಚೂರಿಚಿಕ್ಕಣ್ಣ
  • ಗೋವಾದಲ್ಲಿ ಸಿ.ಐ.ಡಿ. ೯೯೯ ಮತ್ತು
  • ಆಪರೇಷನ್ ಡೈಮಂಡ್ ರಾಕೆಟ್
  • ಆಪರೇಷನ್ ಜಾಕ್‍ಪಾಟ್‍ನಲ್ಲಿ ಸಿ.ಐ.ಡಿ. ೯೯೯
  • ಭಲೇ ಹುಚ್ಚ
  • ಜೇಡರ ಬಲೆ,
  • ಜೇಡರ ಬಲೆ
                                     

2.7. ಬಣ್ಣದ ಬದುಕು ಖಳ/ಪ್ರತಿನಾಯಕನ ಪಾತ್ರದಲ್ಲಿ

  • ಕರುಣೆಯೇ ಕುಟುಂಬದ ಕಣ್ಣು
  • ತುಂಬಿದ ಕೊಡ
  • ದಾರಿ ತಪ್ಪಿದ ಮಗ - ಪ್ರಕಾಶ್
  • ಸಾಕು ಮಗಳು
  • ಶ್ರೀ ಕೃಷ್ಣಗಾರುಡಿ - ಅರ್ಜುನ
  • ಭಕ್ತ ಪ್ರಹ್ಲಾದ - ಹಿರಣ್ಯಕಶ್ಯಪು
  • ದಶಾವತಾರ
  • ಸತಿ ಶಕ್ತಿ - ರಕ್ತಾಕ್ಷ
  • ಮಹಿಷಾಸುರ ಮರ್ದಿನಿ - ಮಹಿಷಾಸುರ
  • ಶ್ರೀ ಕನ್ನಿಕಾಪರಮೇಶ್ವರಿ ಕಥೆ - ರಾಜಾ ವಿಷ್ಣು ವರ್ಧನ
                                     

2.8. ಬಣ್ಣದ ಬದುಕು ಡಾ. ರಾಜ್ ಅತಿಥಿನಟನಾಗಿ ಕಾಣಿಸಿಕೊಂಡ ಚಿತ್ರಗಳು

  • ಶ್ರೀ ಶ್ರೀನಿವಾಸ ಕಲ್ಯಾಣ ೧೯೫೨
  • ಶಿವ ಮೆಚ್ಚಿದ ಕಣ್ಣಪ್ಪ
  • ಗಂಧದಗುಡಿ ಭಾಗ ೨
  • ಭಕ್ತ ಪ್ರಹ್ಲಾದ ೧೯೪೨
  • ನಾಡಿನ ಭಾಗ್ಯ
  • ಜೋಗಿ
  • ಭಾಗ್ಯವಂತ
                                     

3. ಗಾಯಕರಾಗಿ ಡಾ. ರಾಜ್

  • ಇದಕ್ಕೂ ಮುಂಚೆ ೧೯೫೬ರಲ್ಲೇ ಓಹಿಲೇಶ್ವರ ಚಿತ್ರದಲ್ಲಿ "ಶರಣು ಶಂಭೋ" ಎಂಬು ಗೀತೆಯೊಂದನ್ನು ಹಾಗೂ ಮಹಿಷಾಸುರ ಮರ್ಧಿನಿ ಚಿತ್ರದಲ್ಲಿ ಎಸ್.ಜಾನಕಿಯವರೊಡನೆ "ತುಂಬಿತು ಮನವ ತಂದಿತು ಸುಖವ" ಎಂಬ ಯುಗಳ ಗೀತೆಯನ್ನು ಹಾಡಿದ್ದರು. ಈ ಮೂರು ಚಿತ್ರಗಳು ಜಿ.ಕೆ.ವೆಂಕಟೇಶ್ ಅವರ ಸಂಗೀತ ನಿರ್ದೇಶನವನ್ನು ಹೊಂದಿದ್ದವು.
  • ಜಿ.ಕೆ.ವೆಂಕಟೇಶ್ ಹಾಗೂ ಉಪೇಂದ್ರಕುಮಾರ್ ಸಂಗೀತದಲ್ಲಿ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
  • ಕೇವಲ ನಟನೆಯಲ್ಲದೆ, ಅತ್ಯುತ್ತಮ ಗಾಯಕರೂ ಆಗಿದ್ದ ರಾಜ್ ಕನ್ನಡ ಗಾನಲೋಕಕ್ಕೂ ತಮ್ಮ ಅಪಾರ ಸೇವೆ ಸಲ್ಲಿಸಿದ್ದಾರೆ. ೧೯೭೪ರಲ್ಲಿ ಬಿಡುಗಡೆಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ,ಊರೇ ಹೋರಾಡಲಿ ಎಮ್ಮೆ ಹಾಡೆಂದೇ ಪ್ರಸಿದ್ಧಿ ಎಂಬ ಹಾಡಿನಿಂದ ಅವರು ಪೂರ್ಣ ಪ್ರಮಾಣದ ಗಾಯಕರಾಗಿ ಹೊರ ಹೊಮ್ಮಿದರು.

೧೯೬೨ರಲ್ಲಿ, ದೇವಸುಂದರಿ ಚಿತ್ರದಲ್ಲಿ ಹಾಸ್ಯರತ್ನ ನರಸಿಂಹರಾಜು ಅವರ ಪಾತ್ರಕ್ಕೆ ಯುಗಳ ಗೀತೆಯೊಂದನ್ನೂ ಹಾಡಿದ್ದಾರೆ. ಡಾ. ರಾಜ್ ಅವರು ಬೇರೊಬ್ಬರ ಅಭಿನಯಕ್ಕೆ ಹಿನ್ನೆಲೆ ಗಾಯನ ಮಾಡಿದ ಮೊದಲ ಚಿತ್ರಗೀತೆಯಿದು. ೧೯೬೪ರಲ್ಲಿ, ನವಕೋಟಿನಾರಾಯಣ ಭಕ್ತ ಪುರಂದರದಾಸ ಚಲನಚಿತ್ರದಲ್ಲಿ ಕೆಲವು ಕೀರ್ತನೆ ಗಳನ್ನು ಹಾಡಿದ್ದಾರೆ.

  • ಜೀವನ ಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು.

೨೦೦೩ರಲ್ಲಿ ಬಿಡುಗಡೆಯಾದ ಅಭಿ ಚಿತ್ರದ "ವಿಧಿ ಬರಹ ಎಂಥ ಘೋರ" ಹಾಗು ಅದೇ ವರ್ಷದ ಚಿಗುರಿದ ಕನಸು ಚಿತ್ರದ "ಬಂಧುವೇ ಓ ಬಂಧುವೇ" ಇವರು ಹಾಡಿದ ಇತ್ತೀಚಿನ ಚಿತ್ರಗೀತೆಗಳಾಗಿರುತ್ತವೆ.

  • ರಾಜ್ ಕುಮಾರ್ ಅವರು ತಮ್ಮ ಹೆಚ್ಚಿನ ಹಾಡುಗಳನ್ನು ಎಸ್. ಜಾನಕಿ ಮತ್ತು ವಾಣಿ ಜಯರಾಂ ಅವರೊಂದಿಗೆ ಹಾಡಿದ್ದಾರೆ. ಅಲ್ಲದೆ, ಪಿ. ಸುಶೀಲ, ಬೆಂಗಳೂರು ಲತಾ, ರತ್ನಮಾಲ ಪ್ರಕಾಶ್, ಮಂಜುಳಾ ಗುರುರಾಜ್, ಬಿ. ಆರ್. ಛಾಯಾ, ಕಸ್ತೂರಿ ಶಂಕರ್, ಚಿತ್ರಾ, ಸುಲೋಚನಾ ಅವರೊಂದಿಗೂ ಯುಗಳಗೀತೆಗಳನ್ನು ಹಾಡಿದ್ದಾರೆ.
  • ಹುಟ್ಟಿದರೇ ಕನ್ನಡನಾಡ್ನಲ್ ಹುಟ್ಟಬೇಕು, ಮೆಟ್ಟಿದರೇ, ಕನ್ನಡ ಮಣ್ಣನ್ ಮೆಟ್ಟಬೇಕು ಗೀತೆಯನ್ನು ಸಾಮಾನ್ಯವಾಗಿ ಹೋದೆಡೆಯಲ್ಲೆಲ್ಲಾ ಹಾಡುತ್ತಿದ್ದರು. ತಮ್ಮ ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ, ವನ್ನು ದೆಹಲಿಯಲ್ಲಿ ಪಡೆದ ಬಳಿಕ, ಮುಂಬಯಿ ಗೆ ಭೇಟಿಕೊಟ್ಟಾಗ, ಕರ್ನಾಟಕ ಸಂಘ ದ ರಂಗಮಂಚದ ಮೇಲೆ, ಮೇಲಿನ ಗೀತೆಯನ್ನು ಅವರ ಮಕ್ಕಳ ಸಮೇತ ಕುಣಿದು-ಕುಪ್ಪಳಿಸಿ ಹಾಡಿದ ಸಡಗರ ಇನ್ನೂ ಮುಂಬಯಿ ನಗರದ, ಕನ್ನಡ ರಸಿಕರ ಮನದಲ್ಲಿ ಹಸಿರಾಗಿ ಉಳಿದಿದೆ.
  • ಚಿತ್ರಗೀತೆಗಳಷ್ಟೇ ಅಲ್ಲದೆ ಹಲವಾರು ಭಕ್ತಿಗೀತೆಗಳನ್ನು ಹಾಡಿರುವರು. ಕನ್ನಡವೇ ಸತ್ಯ, ಅನುರಾಗ, ಮಂಕುತಿಮ್ಮನ ಕಗ್ಗ - ರಾಜ್ ಕಂಠದಲ್ಲಿ ಮೂಡಿ ಬಂದ ಭಾವಗೀತೆ ಸಂಕಲನಗಳು.
  • ರಾಷ್ಟ್ರಕವಿ ಕುವೆಂಪು ರಚಿಸಿದ ಕನ್ನಡವೇ ಸತ್ಯ ಹಾಡನ್ನು ಡಾ. ರಾಜಕುಮಾರ್‌ ಭಾವಗೀತೆಯ ಮೇರು ಕಲಾವಿದ ಡಾ. ಸಿ.ಅಶ್ವತ್ಥ್‌ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ್ದಾರೆ. ಇದು ಮೈಸೂರು ಅನಂತಸ್ವಾಮಿಯವರ ಆವೃತ್ತಿಗಿಂತಲೂ ಭಾರೀ ಜನಪ್ರಿಯತೆ ಗಳಿಸಿತು.


                                     

4. ಕನ್ನಡಪರ ಚಳುವಳಿಗಳಲ್ಲಿ ಡಾ. ರಾಜ್

  • ಇದೇ ಚಳುವಳಿಯು ಗೋಕಾಕ್ ಚಳುವಳಿ ಎಂದೇ ಹೆಸರಾಯಿತು.
  • ಚಳುವಳಿಯು ಪ್ರಾರಂಭಗೊಂಡು ಹಲವಾರು ದಿನಗಳು ಕಳೆದರೂ, ಜನಸಾಮಾನ್ಯರಿಂದ ಉತ್ಸಾಹದ ಪ್ರತಿಕ್ರಿಯೆ ಕಂಡುಬರಲಿಲ್ಲ. ಈ ಸಮಯದಲ್ಲಿ, ಡಾ. ರಾಜ್ ಅವರನ್ನು ಚಳುವಳಿಗೆ ಆಹ್ವಾನಿಸಿ, ಚಳುವಳಿಯ ಬಲವರ್ಧನೆ ಮಾಡಬೇಕೆಂದು ಕೋರಲಾಯಿತು. ಡಾ. ರಾಜ್ ನೇತೃತ್ವದಲ್ಲಿ ಕನ್ನಡ ಚಿತ್ರರಂಗ, ಗೋಕಾಕ್ ಚಳುವಳಿಗೆ ಸಂಪೂರ್ಣ ಸಹಕಾರ ನೀಡಲು ಪ್ರಕಟಿಸಿ, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿತು.
  • ಹಲವಾರು ಸಭೆಗಳು, ಭಾಷಣಗಳು ಕರ್ನಾಟಕದ ಪ್ರಮುಖ ನಗರಗಳಲ್ಲಿ ಜರುಗಿದವು. ಕರ್ನಾಟಕದ ಜನತೆ ಚಳುವಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಉತ್ಸಾಹದಿಂದ ಪ್ರತಿಕ್ರಿಯಿಸಿದರು, ಭಾಗವಹಿಸಿದರು. ಕನ್ನಡದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು, ಅಭಿಮಾನ ಬೆಳೆಸಲು, ಕನ್ನಡ ಭಾಷೆಗೆ ಸಿಗಬೇಕಾದ ಹಕ್ಕುಗಳು, ಸೌಲಭ್ಯಗಳನ್ನು ಆಗಿನ ಕರ್ನಾಟಕ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲು, ಡಾ. ರಾಜ್ ಅವರ ಭಾಷಣಗಳು ಹಾಗು ಚಳುವಳಿಯ ನೇತೃತ್ವ ಸಹಾಯಕಾರಿಯಾದವು. ಗುಂಡೂರಾವ್ ನೇತೃತ್ವದ ಆಗಿನ ಕರ್ನಾಟಕ ಸರ್ಕಾರವು ಚಳುವಳಿಯ ತೀವ್ರತೆಗೆ ಸ್ಪಂದಿಸಿ, ಗೋಕಾಕ್ ವರದಿಯನ್ನು ಜಾರಿಗೊಳಿಸಿತು.
  • ಗೋಕಾಕ್ ವರದಿ ಯು ಕನ್ನಡವನ್ನು ಪ್ರಾಥಮಿಕ ಶಿಕ್ಷಣದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವುದು ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕನ್ನಡ ಭಾಷೆಗೆ ಕೊಡುವುದರ ಬಗ್ಗೆ ಸಿದ್ಧವಾಗಿತ್ತು. ಆದರೆ, ಈ ವರದಿಯು ಜಾರಿಗೆ ಬಂದಿರಲಿಲ್ಲ. ೧೯೮೧ರಲ್ಲಿ, ಪಾಟೀಲ ಪುಟ್ಟಪ್ಪ, ಚಂದ್ರಶೇಖರ ಪಾಟೀಲ್ ಮುಂತಾದ ಸಾಹಿತಿಗಳು, ಕನ್ನಡ ವಿದ್ಯಾರ್ಥಿಗಳು, ಹಲವು ಸಂಘಸಂಸ್ಥೆಗಳು ಗೋಕಾಕ್ ವರದಿಯನ್ನು ಜಾರಿಗೊಳಿಸುವಂತೆ ಚಳುವಳಿಯನ್ನು ಪ್ರಾರಂಭ ಮಾಡಿದರು.
                                     

5. ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು

ಬಿರುದುಗಳು

  • ರಸಿಕರ ರಾಜ ಅಭಿಮಾನಿಗಳಿಂದ
  • ವರನಟ ಪತ್ರಕರ್ತರು, ಅಭಿಮಾನಿಗಳು
  • ಗಾನಗಂಧರ್ವ ಅಭಿಮಾನಿ ಸಂಘಗಳಿಂದ
  • ಕನ್ನಡದ ಕಣ್ಮಣಿ ಅಭಿಮಾನಿಗಳಿಂದ
  • ಮೇರು ನಟ ಅಭಿಮಾನಿಗಳಿಂದ
  • ನಟಸಾರ್ವಭೌಮ ೧೦೦ನೆಯ ಚಿತ್ರದ ಸಂದರ್ಭದಲ್ಲಿ
  • ಅಣ್ಣಾವ್ರು ಅಭಿಮಾನಿಗಳಿಂದ

ಡಾ. ರಾಜ್‌ಕುಮಾರ್ ರಸ್ತೆ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಯಶವಂತಪುರ ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ ರಾಜಾಜಿನಗರದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ ಡಾ. ರಾಜ್‌ಕುಮಾರ್ ರಸ್ತೆ ಎಂದು ಹೆಸರಿಸಲಾಗಿದೆ.

                                     

5.1. ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು ಪ್ರಶಸ್ತಿಗಳು

  • ಅತ್ಯುತ್ತಮ ನಟ - ಫಿಲ್ಮ್‌ಫೇರ್ ಪ್ರಶಸ್ತಿ ಹತ್ತು ಬಾರಿ
  • ರಾಷ್ಟ್ರಪ್ರಶಸ್ತಿ ಜೀವನ ಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ
  • ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ೧೯೯೫ರಲ್ಲಿ ಭಾರತ ಸರ್ಕಾರದಿಂದ
  • ನಾಡೋಜ ಪ್ರಶಸ್ತಿ ಕನ್ನಡ ವಿಶ್ವವಿದ್ಯಾಲಯ, ಹಂಪಿ
  • ಕೆಂಟಕಿ ಕರ್ನಲ್ ಅಮೆರಿಕದ ಕೆಂಟಕಿ ರಾಜ್ಯದ ಗವರ್ನರ್ ೧೯೮೫ರಲ್ಲಿ ಬೆಂಗಳೂರಲ್ಲಿ ನೀಡಿದರು
  • ಅತ್ಯುತ್ತಮ ನಟ - ರಾಜ್ಯಪ್ರಶಸ್ತಿ ಒಂಭತ್ತು ಬಾರಿ
  • ಪದ್ಮಭೂಷಣ ಭಾರತ ಸರ್ಕಾರದಿಂದ
  • ಕರ್ನಾಟಕ ರತ್ನ ಕರ್ನಾಟಕ ಸರ್ಕಾರ
  • ಗುಬ್ಬಿ ವೀರಣ್ಣ ಪ್ರಶಸ್ತಿ ಕರ್ನಾಟಕ ಸರ್ಕಾರ
  • ಕಲಾ ಕೌಸ್ತುಭ ವೃತ್ತಿ ರಂಗಭೂಮಿಗೆ ಸಲ್ಲಿಸಿದ ಸೇವೆಗೆ, ಕರ್ನಾಟಕ ಸರ್ಕಾರದಿಂದ
                                     

5.2. ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು ಬಿರುದುಗಳು

  • ರಸಿಕರ ರಾಜ ಅಭಿಮಾನಿಗಳಿಂದ
  • ವರನಟ ಪತ್ರಕರ್ತರು, ಅಭಿಮಾನಿಗಳು
  • ಗಾನಗಂಧರ್ವ ಅಭಿಮಾನಿ ಸಂಘಗಳಿಂದ
  • ಕನ್ನಡದ ಕಣ್ಮಣಿ ಅಭಿಮಾನಿಗಳಿಂದ
  • ಮೇರು ನಟ ಅಭಿಮಾನಿಗಳಿಂದ
  • ನಟಸಾರ್ವಭೌಮ ೧೦೦ನೆಯ ಚಿತ್ರದ ಸಂದರ್ಭದಲ್ಲಿ
  • ಅಣ್ಣಾವ್ರು ಅಭಿಮಾನಿಗಳಿಂದ
                                     

5.3. ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು ಡಾ. ರಾಜ್‌ಕುಮಾರ್ ರಸ್ತೆ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಯಶವಂತಪುರ ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ ರಾಜಾಜಿನಗರದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ ಡಾ. ರಾಜ್‌ಕುಮಾರ್ ರಸ್ತೆ ಎಂದು ಹೆಸರಿಸಲಾಗಿದೆ.

                                     

5.4. ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು ಗೂಗಲ್‌ ಡೂಡಲ್‌ ಗೌರವ

ಗೂಗಲ್‌ ಸರ್ಚ್‌‌ನ ಡೂಡಲ್‌ ವಿಭಾಗದವರು ಡಾ. ರಾಜ್‌ಕುಮಾರ್‌ ಅವರ ೮೮ನೇ ಹುಟ್ಟು ಹಬ್ಬದ ದಿನ ೨೪ ಏಪ್ರಿಲ್‌ ೨೦೧೭ ರಾಜ್‌ ಅವರ ಡೂಡಲ್‌ ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದರು. ಈ ಡೂಡಲ್‌ ದೇಶಾದ್ಯಂತ google.co.in ಎಲ್ಲಾ ರಾಜ್ಯಗಳಲ್ಲೂ ಪ್ರದರ್ಶಿತಗೊಂಡು ಪರ ರಾಜ್ಯದವರಿಗೂ ರಾಜ್‌ ಅವರ ಬಗ್ಗೆ ಕುತೂಹಲ ಮೂಡುವಂತೆ ಮಾಡಿತು. ತೆಂಕಣ ಭಾರತದ ನಟರಿಗೆ ಗೂಗಲ್‌ ಈ ರೀತಿಯ ಗೌರವ ಸಲ್ಲಿಸಿರುವುದು ಇದೇ ಮೊದಲು. ಇದಕ್ಕಾಗಿ ಕನ್ನಡಿಗರು ಗೂಗಲ್‌ನವರಿಗೂ ಅಭಿನಂದನೆ ಸಲ್ಲಿಸಿದರು.

                                     

6.1. ಪುಸ್ತಕಗಳು ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ ಪಿ.ಹೆಚ್.ಡಿ ನಿಬಂಧ

  • ೧೯೯೭ರಲ್ಲಿ ಪ್ರಾರಂಭಿಸಿದ ಸಂಶೋಧನೆಯನ್ನು ನಾಲ್ಕುವರ್ಷಗಳ ಕಾಲ ಡಾ. ಮಳಲಿ ವಸಂತಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಗುರುಮೂರ್ತಿ ೨೦೦೧ರಲ್ಲಿ ಪಿ.ಹೆಚ್.ಡಿ ಪದವಿ ಪಡೆದರು.
  • ಬೆಂಗಳೂರಿನ ಬಸವನಗುಡಿಯಲ್ಲಿರುವ ವಿಜಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಿ. ಗುರುಮೂರ್ತಿ ಹಾರೋಹಳ್ಳಿ ಅವರು "ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ" ಕುರಿತ ಸಂಶೋಧನಾತ್ಮಕ ಪ್ರಬಂಧ ಮಂಡಿಸಿ, ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಶೋಧನೆಯ ಸಮಯದಲ್ಲಿ, ಡಾ. ರಾಜ್ ಅವರನ್ನು ಹಲವಾರು ಬಾರಿ ಸಂದರ್ಶಿಸಿದ್ದಾರೆ.
                                     

6.2. ಪುಸ್ತಕಗಳು ಪ್ರಾಣಪದಕ

  • ಪ್ರಾಣಪದಕ ಡಾ. ರಾಜಕುಮಾರ್ ಅವರನ್ನು ಕುರಿತ 2013ರ ಅಕ್ಟೋಬರ್ ತಿಂಗಳಿನಲ್ಲಿ ಅ. ನಾ. ಪ್ರಹ್ಲಾದರಾವ್ ಬರೆದ ಸ್ವಾರಸ್ಯಕರ ಸಂಗತಿಗಳ ಮತ್ತೊಂದು ಪುಸ್ತಕ. ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ನೆನಪಿನಾಳದಲ್ಲಿನ ಡಾ. ರಾಜಕುಮಾರ್ ಸಂಗತಿಗಳನ್ನು ಅನಾವರಣಗೊಳಿಸುವ, ವಸಂತ ಪ್ರಕಾಶನ ಪ್ರಕಾಶನಗೊಳಿಸಿರುವ ಅ. ನಾ. ಪ್ರಹ್ಲಾದರಾವ್ ಬರೆದ ವಿಶಿಷ್ಟ ಪುಸ್ತಕ ಪ್ರಾಣಪದಕ. ಸುಮಾರು 120 ಪುಟಗಳ ಈ ಪುಸ್ತಕದ ಲೇಖನಗಳು `ಮಂಗಳ` ವಾರಪತ್ರಿಕೆಯಲ್ಲಿ ಪ್ರಕಟಿಗೊಂಡಿದ್ದವು.
  • ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಲೇಖಕ ರೊಂದಿಗೆ ಹಲವು ವಿಷಯ ಗಳನ್ನು ನೆನಪು ಮಾಡಿಕೊಂಡರು. ಪ್ರಾಣಪದಕ ಹೆಸರಿನಲ್ಲಿ ಮಂಗಳ ವಾರಪತ್ರಿಕೆ ಈ ಲೇಖನಗಳನ್ನು ಪ್ರಕಟಿಸಿತ್ತು.
                                     

6.3. ಪುಸ್ತಕಗಳು ಬಂಗಾರದ ಮನುಷ್ಯ

ಕನ್ನಡದ ವರನಟ ಡಾ. ರಾಜಕುಮಾರ್ ಅವರ ಜೀವನ ಹಾಗೂ ಸಾಧನೆ ಕುರಿತು ಕರ್ನಾಟಕ ಸರ್ಕಾರಕ್ಕಾಗಿ ಅ. ನಾ. ಪ್ರಹ್ಲಾದರಾವ್ ಬರೆದ ಬಂಗಾರದ ಮನುಷ್ಯ ಅತ್ಯಂತ ಜನಪ್ರಿಯ ಪುಸ್ತಕ.

  • ಕನ್ನಡ ಪುಸ್ತಕ ೨೦೦೬ರಲ್ಲಿ ಅಮೆರಿಕದ ವಾಷಿಂಗ್ಟನ್ ನಗರದಲ್ಲಿ ನಡೆದ ಅಕ್ಕ ಸಮ್ಮೇಳನ, ೨೦೦೬ರಲ್ಲಿ ಕುವ್ಯೆತ್ ಕನ್ನಡ ಸಮ್ಮೇಳನದಲ್ಲಿ ಬಿಡುಗಡೆಗೊಂಡಿತು. ಇಂಗ್ಲಿಷ್ ಪುಸ್ತಕ ಬೆಂಗಳೂರಿನಲ್ಲಿ ಶ್ರೀಮತಿ ಪಾವ೯ತಮ್ಮ ರಾಜಕುಮಾರ್ ಅವರಿಂದ ಬಿಡುಗಡೆಗೊಂಡಿತಲ್ಲದೆ, ಲಂಡನ್ ನಗರದಲ್ಲಿ ೨೦೦೮ರ ಆಗಸ್ಟ್ ತಿಂಗಳಿನಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ಅಲ್ಲಿನ ಸೆನೆಟರ್ ಬಿಡುಗಡೆ ಮಾಡಿದರು.
  • ಈ ಪುಸ್ತಕ ಇಂಗ್ಲಿಷ್ ಭಾಷೆಗೆ `ಡಾ. ರಾಜಕುಮಾರ್ ಇನ್ಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್` ಹೆಸರಿನಲ್ಲಿ ಭಾಷಾಂತರಗೊಂಡು ಅಮೆರಿಕದ ನ್ಯೂಜೆರ್ಸಿ ನಗರದಲ್ಲಿ ಬಿಡುಗಡೆಗೊಂಡಿತು. ಕನ್ನಡದ ನಟರೊಬ್ಬರನ್ನು ಕುರಿತ ಇಂಗ್ಲಿಷ್ ಪುಸ್ತಕವೊಂದು ಭಾರತದ ಹೊರಗಡೆ ಬಿಡುಗಡೆಗೊಂಡ ಮೊದಲ ಪುಸ್ತಕ ಇದೆಂಬ ದಾಖಲೆಯನ್ನೂ ಮಾಡಿತು. ಕನ್ನಡ ಪುಸ್ತಕ ಬಿಡುಗಡೆ ಗೊಂಡ ಸಂದರ್ಭದಲ್ಲಿ ಡಾ. ರಾಜಕುಮಾರ್ ಹಾಗೂ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರು ತಮ್ಮ ಮನೆಗೆ ಲೇಖಕರ ಕುಟುಂಬವನ್ನು ಬರಮಾಡಿಕೊಂಡು ಆತಿಥ್ಯ ನೀಡಿದ್ದರು.
  • ೨೨೦ ಪುಟಗಳ ಈ ಪುಸ್ತಕ ಡಾ. ರಾಜಕುಮಾರ್ ಅವರಿಂದಲೇ ಪ್ರಶಂಸೆಗೆ ಒಳಗಾಯಿತು.
  • ಇದು ಡಾ. ರಾಜಕುಮಾರ್ ಅವರನ್ನು ಕುರಿತಾದ ಮೊದಲ ಇಂಗ್ಲಿಷ್ ಪುಸ್ತಕವೇ ಅಲ್ಲದೆ, ದೇಶದ ಹೊರಗಡೆ ಬಿಡುಗಡೆ ಆದ ಡಾ. ರಾಜಕುಮಾರ್ ಕುರಿತಾದ ಮೊದಲ ಪುಸ್ತಕವೂ ಹೌದು. ಈ ಪುಸ್ತಕದಲ್ಲಿ ಡಾ. ರಾಜಕುಮಾರ್ ಚಲನಚಿತ್ರಗಳ ಬಗ್ಗೆ ವಿವರಗಳಷ್ಟೆ ಅಲ್ಲದೆ, ಅವರ ಸಾಮಾಜಿಕ ಬದುಕು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯ ವಿವರಗಳನ್ನು ದಾಖಲಿಸಲಾಗಿದೆ.
                                     

7. ಹೊರಗಿನ ಸಂಪರ್ಕಗಳು

ರಾಜ್‌ಕುಮಾರ್ ಐ ಎಮ್ ಡಿ ಬಿನಲ್ಲಿ

  • ದಟ್ಸ ಕನ್ನಡ.ಕಾಂ - ಡಾ. ರಾಜ್ ಲೇಖನಗಳ ಸಂಗ್ರಹ
  • ಬೇಡರಕಣ್ಣಪ್ಪ ಚಿತ್ರಕ್ಕೆ ಆಯ್ಕೆ ವಿವರಗಳು - ಹೆಚ್.ಎಲ್.ಎನ್.ಸಿಂಹರವರ ಪುತ್ರ ಹೆಚ್.ಎಲ್.ಶೇಷಚಂದ್ರ ಲೇಖನ ಕನ್ನಡಪ್ರಭ
  • ವಿಶ್ವಕನ್ನಡ.ಕಾಂ - ಡಾ. ರಾಜ್ ವಿಶೇಷ ಪರಿಚಯ ಕೃಪೆ:"ಕನ್ನಡ ಸಿನಿಮಾ ಇತಿಹಾಸ ಪುಟಗಳಲ್ಲಿ" ಪುಸ್ತಕ
                                               

ಬಂಗಾರದ ಮನುಷ್ಯ

ಬಂಗಾರದ ಮನುಷ್ಯ ೧೯೭೨ರಲ್ಲಿ ಬಿಡುಗಡೆಯಾದ ರಾಜ್‌ಕುಮಾರ್ ಅಭಿನಯದ ಚಲನಚಿತ್ರದ ಮಾಹಿತಿಗಾಗಿ ಈ ಪುಟವನ್ನು ನೋಡಿ. ಎ.ಎನ್. ಪ್ರಹ್ಲಾದ ರಾವ್ರವರು ರಚಿಸಿರುವ ರಾಜ್‌ಕುಮಾರ್ ಆತ್ಮಚರಿತ್ರೆಗಾಗಿ ಈ ಪುಟವನ್ನು ನೋಡಿ

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →