Back

ⓘ ದ್ರಾವಿಡರು ಭಾರತದ ಮೂಲನಿವಾಸಿಗಳೆಂದೂ ಮಧ್ಯ ಏಷ್ಯಾದಿಂದ ಬಂದ ಆರ್ಯರು ಇವರನ್ನು ಸೋಲಿಸಿ, ದಕ್ಷಿಣಕ್ಕೆ ಅಟ್ಟಿದರೆಂದೂ ಆದ್ದರಿಂದ ಉತ್ತರ ಭಾರತದ ಸಂಸ್ಕøತಿ ಆರ್ಯರದಾಯಿತೆಂದೂ ದಕ್ಷಿಣದಲ್ಲಿ ದ್ರಾವಿ ..                                               

ಶಿವ

ಮಂಗಳಕರನೋ ಅವನೇ ಶಿವ. ʽಹಿಂದೂʼ ಧರ್ಮದಲ್ಲಿ ಯಾವ ಯಾವಾಗ ನಿರಾಕಾರ ಉಪಾಸನೆ ಬರುತ್ತದೋ ಆಗ ಆ ಪರಬ್ರಹ್ಮವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು ಹಿಂದೂ ಧರ್ಮದ ಪ್ರಕಾರ ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ. ಶಿವನಿಗೆ ಲಯಕಾರಕ ಎಂದೂ ಸಹ ಕರೆಯುತ್ತಾರೆ. ಅಂದರೆ ಸೃಷ್ಟಿ ಮಾಡುವುದು ಬ್ರಹ್ಮನ ಕೆಲಸವಾದರೆ, ಆ ಸೃಷ್ಟಿಯಾದ ಆಕರಗಳಿಗೆ ಜೀವಿಗಳಿಗೆ ಸ್ಥಿತಿ ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ಲಯ ಕೊನೆ ಕಾಣಿಸುವವನು ಶಿವ. ಆದ್ದರಿಂದ ಶಿವನಿಗೆ ಲಯಕಾರ ಎಂದೂ ಸಹ ಕರೆಯುತ್ತಾರೆ. ಸಂಹಾರಕ ಅಥವಾ ಲಯಕಾರಕ ದೇವತೆ: ಶಿವ ಅಥವಾ ರುದ್ರ ಋಗ್ವೇದದಲ್ಲಿ ಶಿವ ಎನ್ನುವ ದೇವತೆ ಇಲ್ಲ. ರುದ್ರ ಎನ್ನುವ ಹೆಸರಿನ ದೇವತೆ ಇದ್ದಾನೆ. ಈ ರುದ್ರ ...

                                               

ವಿಧಾನಸೌಧ

ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ.ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸಾರ್ವಜನಿಕ ಕಾರ್ಯಗಳ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್‌ ಹಾಗೂ ವಾಸ್ತುಶಿಲ್ಪಿಯಾಗಿದ್ದ ಮಾಣಿಕ್ಯಂ ಕಟ್ಟಡ ನಿರ್ಮಾಣದ ಉಸ್ತುವಾರಿ ನೋಡಿಕೊಂಡರು. ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವ ...

                                               

ಗೋಪುರ

ಗೋಪುರ ವು ಮುಖ್ಯವಾಗಿ ಔನ್ನತ್ಯದ ದೃಷ್ಟಿಯಿಂದ ರಚಿಸಲಾದ, ಆದ್ದರಿಂದ ತನ್ನ ವ್ಯಾಸಕ್ಕಿಂತ ಎತ್ತರವಾದ ಅಥವಾ ತನ್ನ ಸ್ಥಾನಮಹತ್ತ್ವದಿಂದಾಗಿ ಎತ್ತರವಾದ ಕಟ್ಟಡ. ಅದು ಒಂದು ಪ್ರತ್ಯೇಕ ಕಟ್ಟಡವಾಗಿರಬಹುದು; ಅಥವಾ ದೊಡ್ಡ ಕಟ್ಟಡವೊಂದಕ್ಕೆ ಸೇರಿದಂತಿರಬಹುದು; ಇಲ್ಲೇ ಗೋಡೆಯ ಮೇಲಿಂದ ಚಾಚಿ ನಿಂತಂತೆ ನಿರ್ಮಿಸಿದ್ದಾಗಿರಬಹುದು. ಆಧುನಿಕ ಗೋಪುರಗಳು ಸಾಮಾನ್ಯವಾಗಿ ಕಠಿನ ಚೌಕಟ್ಟುಗಳಿಂದ ನಿರ್ಮಿಸಿದವಾಗಿರುತ್ತವೆ. ಊರಿನ ಸುತ್ತ ರಕ್ಷಣೆಗಾಗಿ ಕಟ್ಟಿದ ಕೋಟೆಗಳ ಎತ್ತರ ಹೆಬ್ಬಾಗಿಲುಗಳನ್ನು ಗೋಪುರ ಎನ್ನುತ್ತಿದ್ದುದುಂಟು. ಕಾಲಕ್ರಮದಲ್ಲಿ ದೇವಾಲಯಗಳನ್ನು ಸುತ್ತಿಕೊಂಡಿರುವ ಪ್ರಾಕಾರಗಳ ಮಹಾದ್ವಾರಗಳನ್ನೂ ಗೋಪುರ ಎಂದು ಕರೆದರೂ ಆ ಮಹಾದ್ವಾರದ ಮೇಲೆ ಹಲವು ಅಂತಸ್ತುಗಳಾಗಿ ಉನ್ನತವಾಗಿ ಕಟ್ಟಲಾದ ಕಟ್ಟಡವನ್ನು ಮುಖ್ಯವಾಗಿ ಗೋಪುರ ಎಂಬ ಹೆಸರಿನಿಂದ ಕರೆಯಲಾ ...

                                               

ಉಭಯ ವೇದಾಂತ

ಉಭಯ ವೇದಾಂತ: ವೇದಾಂತದರ್ಶನದ ಸಮಗ್ರ ಸ್ವರೂಪವನ್ನು ತಿಳಿಯಲು ಸಂಸ್ಕೃತದಲ್ಲಿರುವ ಉಪನಿಷತ್ತುಗಳು, ಬ್ರಹ್ಮಸೂತ್ರ ಮತ್ತು ಗೀತೆಯೊಡನೆ, ದ್ರಾವಿಡ ಪ್ರಬಂಧಗಳ ಅನುಭವವಾಣಿಯನ್ನೂ ಸೇರಿಸಿಕೊಳ್ಳಬೇಕು ಎಂದು ವಾದಿಸಿ ಈ ದ್ವಿಮುಖವಾದ ಅನ್ಯೋನ್ಯ ಪೋಷಕ ಸಾಹಿತ್ಯರಾಶಿಗೆ ಉಭಯ ವೇದಾಂತವೆಂಬ ಪಾರಿಭಾಷಿಕ ನಿರ್ದೇಶವನ್ನು ಕೊಡಲಾಗಿದೆ. ವೇದಾಂತವನ್ನು ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ರಾಮಾನುಜಾಚಾರ್ಯರು ನಿರೂಪಿಸಿದ್ದಾರೆ. ಅವರು ಸಂಸ್ಕೃತ ಆಧಾರಗಳಿಂದ ಒದಗಿಬಂದ ಈ ದರ್ಶನ ಸಂಪ್ರದಾಯ ದೊಡನೆ ದ್ರಾವಿಡದೇಶದಲ್ಲಿ ಪ್ರಾಚೀನ ಕಾಲದಿಂದಲೂ ಬೆಳೆದು ಬಂದಿದ್ದ, ಆಳ್ವಾರುಗಳೆಂಬ ಭಕ್ತ ಪರಂಪರೆಯ, ಕೃತಿಗಳಾದ ದಿವ್ಯ ಪ್ರಬಂಧವನ್ನೂ ಸಂಯೋಜನೆ ಮಾಡುತ್ತಾರೆ. ಈ ಪ್ರಬಂಧಗಳು ವೇದ-ವೇದಾಂತದ ತಮಿಳು ಪರಿವರ್ತನೆಯೆಂದು ಶ್ರೀವೈಷ್ಣವ ಸಂಪ್ರದಾಯ ಪರಿಗಣಿಸುತ್ತದೆ. ಕೆಲವು ...

                                               

ಆಲಂಪುರ

ತುಂಗಭದ್ರಾನದಿಯ ಪಶ್ಚಿಮ ದಡದಲ್ಲಿ, ಆಂಧ್ರದ ಕರ್ನೂಲು ಪಟ್ಟಣಕ್ಕೆ ಸುಮಾರು ಎಂಟು ಮೈಲಿ ದೂರದಲ್ಲಿದೆ. ಭಾರತದ ದೇವಾಲಯಗಳ ಉಗಮ ಮತ್ತು ವಿಕಾಸವನ್ನು ಅಧ್ಯಯನ ಮಾಡಲು ಇಲ್ಲಿನ ದೇವಾಲಯಗಳು ಬಹು ಸಹಾಯಕವಾಗಿವೆ. ಈ ದೃಷ್ಟಿಯಿಂದ ಇದು ಪಟ್ಟದಕಲ್ಲಿನಷ್ಟೇ ಗಮನಾರ್ಹವಾದುದು. ಇಲ್ಲಿ ಪಟ್ಟದಕಲ್ಲಿನ ಪಾಪನಾಥ ದೇವಾಲಯವನ್ನು ಹೋಲುವ ಅನೇಕ ದೇವಾಲಯಗಳಿವೆ. ಇವುಗಳಲ್ಲಿ ಬಾಗುಳ್ಳ ಶಿಖರ, ಆಮಲಕ, ಗೂಡು ಮುಂತಾದವನ್ನು ಕಾಣಬಹುದು. ಚೌಕನೆಯ ಆಚ್ಛಾದಿತ ಹಜಾರಗಳು, ಅಪ್ಸರಶಿಲ್ಪಗಳಿಂದ ಕೂಡಿದ ಕಂಬಗಳು ದಕ್ಷಿಣಾಪಥದ ಗುಹಾಂತರ ದೇವಾಲಯಗಳ ಪ್ರಭಾವವನ್ನು ವ್ಯಕ್ತಪಡಿಸುತ್ತವೆ. ಸುಮಾರು ಒಂದು ಮೈಲಿ ದೂರದಲ್ಲಿ ದ್ರಾವಿಡ ಶೈಲಿಯ ಶಿಖರಗಳನ್ನುಳ್ಳ ಅನೇಕ ದೇವಾಲಯಗಳಿವೆ. ಈ ಶಿಖರಗಳು ಹಂತಗಳಿಂದ ಕೂಡಿದ್ದು, ಮೇಲೆ ಹೋದಂತೆ ಕಿರಿದಾಗುತ್ತವೆ. ಇಲ್ಲಿನ ಶಿಲ್ಪಗಳೂ ಮನೋಹರವಾ ...

                                               

ಕೈದಾಳ

ಕೈದಾಳ ಗ್ರಾಮವು ತುಮಕೂರಿನಿಂದ ಸುಮಾರು ೭ ಕಿ.ಮೀ ದೂರದಲ್ಲಿದೆ. ಇಲ್ಲಿ ಬಹಳ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವ ದೇವಾಲಯವಿದೆ. ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು ೬ ಕಿ.ಮೀ ಚಲಿಸಿದರೆ ಪ್ರಸಿದ್ದವಾದ ಗಣೇಶನ ದೇವಾಲಯವಿರುವ ಗೂಳೂರು ಸಿಗುತ್ತದೆ. ಗೂಳೂರಿನಿಂದ ಬಲಕ್ಕೆ ತಿರುಗಿ ೧ ಕಿ.ಮೀ ಚಲಿಸಿದರೆ ಕೈದಾಳ ತಲುಪಬಹುದು. ಹತ್ತಿರದ ಐತಿಹಾಸಿಕ ಪುಣ್ಯಕ್ಷೇತ್ರಗಳು: ೧.ಗೂಳೂರು, ೨.ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ,

ದ್ರಾವಿಡ
                                     

ⓘ ದ್ರಾವಿಡ

ದ್ರಾವಿಡರು ಭಾರತದ ಮೂಲನಿವಾಸಿಗಳೆಂದೂ ಮಧ್ಯ ಏಷ್ಯಾದಿಂದ ಬಂದ ಆರ್ಯರು ಇವರನ್ನು ಸೋಲಿಸಿ, ದಕ್ಷಿಣಕ್ಕೆ ಅಟ್ಟಿದರೆಂದೂ ಆದ್ದರಿಂದ ಉತ್ತರ ಭಾರತದ ಸಂಸ್ಕøತಿ ಆರ್ಯರದಾಯಿತೆಂದೂ ದಕ್ಷಿಣದಲ್ಲಿ ದ್ರಾವಿಡ ಸಂಸ್ಕೃತಿ ಉಳಿಯಿತೆಂದೂ ಬಹುಕಾಲ ಇತಿಹಾಸದ ಅಭಿಪ್ರಾಯವಾಗಿತ್ತು. ಆರ್ಯರು ಉತ್ತಮರು, ದೃಢಕಾಯರು, ಸುಸಂಸ್ಕøತರು. ದ್ರಾವಿಡರಾದರೋ ಕಪ್ಪುಬಣ್ಣದವರು, ಕುಳ್ಳರು ಮತ್ತು ಕೆಳಮಟ್ಟದ ಸಂಸ್ಕೃತಿಯಿದ್ದವರು. ಆದ್ದರಿಂದಲೇ ಆರ್ಯರು ಅವರನ್ನು ಗೆಲ್ಲುವುದು ಸಾಧ್ಯವಾಯಿತು. ಅಲ್ಲದೆ ತಮ್ಮ ಸಂಸ್ಕೃತಿಯನ್ನು ಭಾರತದಲ್ಲಿ ಹರಡಲು ಸುಲಭವಾಯಿತು. ದ್ರಾವಿಡರು ಆರ್ಯರ ದಾಸರಾದರು, ದಸ್ಯುಗಳೆನಿಸಿಕೊಂಡರು. ಆರ್ಯ ಸಂಪರ್ಕದಿಂದ ದ್ರಾವಿಡರು ನಾಗರಿಕರಾದರು-ಹೀಗೆಂದು ಬಹುಕಾಲ ವಿದ್ವಾಂಸರು ತಿಳಿದಿದ್ದರು.

                                     

1. ಇತ್ತೀಚಿನ ಸಂಶೋಧನೆಗಳು

ಆದರೆ ಈ ವಾದಸರಣಿ ಸಮಂಜಸವಲ್ಲವೆಂದೂ ಆಧಾರರಹಿತವಾದುದೆಂದೂ ಸತ್ಯಕ್ಕೆ ದೂರವೆಂದೂ ಐತಿಹಾಸಿಕವಲ್ಲವೆಂದೂ ಇತ್ತೀಚಿನ ಸಂಶೋಧನಗಳಿಂದ ಖಚಿತವಾಗಿದೆ. ಮುಖ್ಯವಾಗಿ, ಭಾರತದ ಸಂಸ್ಕೃತಿ ಮತ್ತು ಭಾಷೆಗಳ ವಿಷಯವನ್ನು ಪ್ರಸ್ತಾಪಿಸದೆ, ಬರಿ ಭಾರತೀಯರ ಭೌತಿಕ ಲಕ್ಷಣಗಳ ಆಧಾರದ ಮೇಲೆ ಸಿದ್ಧಾಂತವನ್ನು ರೂಪಿಸಿದ್ದೇ ಈ ವಾದ ಸರಣಿ ದಾರಿ ತಪ್ಪಲು ಕಾರಣವಾಯಿತು. ಅಲ್ಲದೆ ಯಾವ ಖಚಿತವಾದ ಆಧಾರವೂ ಇಲ್ಲದೆ, ಶಾಸ್ತ್ರದ ಬೆಂಬಲವಿಲ್ಲದೆ ಭಾರತೀಯರನ್ನು ಏಳು ಗುಂಪುಗಳನ್ನಾಗಿ ವಿಂಗಡಿಸಿ, ಅದರಲ್ಲಿ ಇಂಡೊ - ಆರ್ಯರು ಮತ್ತು ಮಂಗೋಲ್ - ದ್ರಾವಿಡರು, ಆರ್ಯ - ದ್ರಾವಿಡರು ಮತ್ತು ಸಿಥಿಯ ದ್ರಾವಿಡರನ್ನು ಸೇರಿಸಲಾಯಿತು.

                                     

1.1. ಇತ್ತೀಚಿನ ಸಂಶೋಧನೆಗಳು ಎಲ್ಲರೂ ಹೊರಗಿನಿಂದ ಬಂದವರೇ; ದ್ರವಿಡರು ಮೆಡಿಟರೇನಿಯನ್ ಬುಡಕಟ್ಟಿಗೆ ಸೇರಿದವರು

1933ರಲ್ಲಿ ಹಟನ್ ಎಂಬ ವಿದ್ವಾಂಸ ಈ ವಾದ ಮತ್ತು ವರ್ಗೀಕರಣಗಳನ್ನು ಅಲ್ಲಗೆಳೆದು, ಭಾರತದಲ್ಲಿ ಮೂಲವಾಸಿಗಳು ಯಾರೂ ಇರಲಿಲ್ಲವೆಂದೂ ಎಲ್ಲರೂ ಹೊರಗಿನಿಂದ ಬಂದ ಗುಂಪುಗಳೇ ಆಗಿವೆಯೆಂದೂ ಅವರನ್ನು ಎಂಟು ಗುಂಪುಗಳನ್ನಾಗಿ ವಿಂಗಡಿಸಬಹುದೆಂದೂ ಅಭಿಪ್ರಾಯಪಟ್ಟ. ಈ ಎಂಟು ಗುಂಪುಗಳು ಭಾರತಕ್ಕೆ ಬಂದು ವಿವಿಧ ಪ್ರದೇಶಗಳಲ್ಲಿ ನೆಲಸಿ ತಮ್ಮ ಸಂಸ್ಕೃತಿ ಮತ್ತು ಸಂಸ್ಥೆಗಳನ್ನು ಬೆಳೆಸಿಕೊಂಡರು; ಅವರಲ್ಲಿ ನಾರ್ಡಿಕ್ ಮೂಲಕ್ಕೆ ಸೇರಿದ ವೇದಕಾಲದ ಆರ್ಯರು ಮತ್ತು ಮೆಡಿಟರೇನಿಯನ್ ಬುಡಕಟ್ಟಿಗೆ ಸೇರಿದ ದ್ರಾವಿಡರು ಮುಖ್ಯರಾದವರು.

ಇತ್ತೀಚಿಗೆ ಈ ಕ್ಷೇತ್ರದಲ್ಲಿ ವಿಶೇಷ ಸಂಶೋಧನೆ ನಡೆಸಿದ ಆಂತ್ರೊಪಾಲಾಜಿಕಲ್ ಸರ್ವೆ ಸಂಸ್ಥೆಯ ಮುಖ್ಯಸ್ಥರಾದ ಗುಹ ಅವರು ತಮ್ಮ ರೇಷಿಯಲ್ ಎಲಿಮೆಂಟ್ಸ್ ಇನ್ ಪಾಪ್ಯುಲೇಷನ್ ಎಂಬ ಪುಸ್ತಕದಲ್ಲಿ ಶಾಸ್ತ್ರೀಯವಾದ ಮತ್ತು ವಿದ್ವಾಂಸರಿಂದ ಪುರಸ್ಕರಿಸಲ್ಪಟ್ಟ ವಾದವನ್ನು ಪ್ರತಿಪಾದಿಸಿದ್ದಾರೆ. ಅದರ ಪ್ರಕಾರ ಭಾರತದ ಜನ ಸಮುದಾಯವನ್ನು ಆರು ಮುಖ್ಯ ಜನಾಂಗಗಳಾಗಿ ಮತ್ತು ಒಂಬತ್ತು ಸಣ್ಣ ಭಾಗಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ನಾಲ್ಕನೆಯ ಜನಾಂಗಕ್ಕೆ ಸೇರಿದ ಮೆಡಿಟರೇನಿಯನ್ ಜನರನ್ನು ಕನ್ನಡ, ತಮಿಳು ಮತ್ತು ಮಲೆಯಾಳ ಪ್ರದೇಶಗಳಲ್ಲಿ ಕಾಣಬಹುದಾಗಿದೆಯೆಂದು ಅವರ ಅಭಿಪ್ರಾಯ. ಈ ಬುಡಕಟ್ಟಿಗೆ ಸೇರಿದ ಜನ ಕುಳ್ಳರು. ಕಪ್ಪು ಬಣ್ಣದವರು. ನಿಜ ಮೆಡಿಟರೇನಿಯನ್ ಅಥವಾ ಯೂರೋಪಿಯನ್ ಜನಾಂಗಕ್ಕೆ ಸೇರಿದ ಮತ್ತು ಎತ್ತರದ ಮತ್ತು ದೃಢಕಾಯ ಜನ ಗಂಗಾ ಕಣಿವೆಯಲ್ಲಿ ನೆಲೆಸಿದರು. ಇವರೇ ಆರ್ಯರಿಗಿಂತ ಮುಂಚೆ ಉತ್ತರ ಭಾರತದಲ್ಲಿದ್ದ ದ್ರಾವಿಡರು. ಮುಂದೆ ಇವರೇ ಆರ್ಯರಾದರು. ಉತ್ತರ ಭಾರತದ ಸಂಸ್ಕೃತಿಯ ಬೆಳವಣಿಗೆಗೆ ಪೋಷಕರಾದರು. ಆರನೆಯ ಗುಂಪಾದ ನಾರ್ಡಿಕ್ ಆರ್ಯರು ಭಾರತಕ್ಕೆ ಭಾಷೆಯನ್ನು ಕೊಟ್ಟರು. ಅಲ್ಲದೆ ತಮ್ಮ ಪ್ರತಿಭೆಯಿಂದ ಭಾರತದ ವಿವಿಧ ಸಂಸ್ಕೃತಿಗಳನ್ನು ಒಂದುಗೂಡಿಸಿ, ಭಾರತೀಯ ನಾಗರಿಕತೆಯ ಅಡಿಪಾಯವನ್ನು ಹಾಕಿದರು. ಅಲ್ಲದೆ, ಭಾರತದ ಆರು ಗುಂಪುಗಳಲ್ಲಿ ಪ್ರತ್ಯೇಕತೆಯ ಮನೋಭಾವವಿರಲಿಲ್ಲವಲ್ಲದೆ ಅವು ಮಿಶ್ರಿತವಾದ ಗುಂಪುಗಳೇ ಆಗಿದ್ದವು. ಆದ್ದರಿಂದ ಭಾರತದ ಇತಿಹಾಸದ ಪ್ರಾರಂಭದಿಂದಲೂ ಇಂಥ ಜನಾಂಗದ ಮಿಶ್ರಣವನ್ನು ಕಾಣಬಹುದಾಗಿದೆ. ಭಾಷೆಯೇ, ಜನಾಂಗದ ಜೀವಾಳವಾದುದರಿಂದ, ಅದರಿಂದಲೇ ಒಂದು ಜನಾಂಗದ ಸಂಸ್ಕೃತಿಯನ್ನು ಅಳೆಯಬೇಕೇ ಹೊರತು, ಬುಡಕಟ್ಟಿನ ಆಧಾರದ ಮೇಲಲ್ಲ.

ಮೇಲೆ ಪಟ್ಟಿ ಮಾಡಿದ ಆರು ಗುಂಪುಗಳು ಒಂದು ಜನಾಂಗವಾಯಿತಲ್ಲದೆ ಅದು ನಾಲ್ಕು ಭಾಷೆಗಳನ್ನು ಹೊಂದಿತ್ತು. ಅದರಲ್ಲಿ ದ್ರಾವಿಡ ಮತ್ತು ಇಂಡೊ-ಯೂರೋಪಿಯನ್ ಆರ್ಯ ಭಾಷೆಗಳು ಸೇರಿವೆ. ದ್ರಾವಿಡ ಭಾಷೆಗಳು ವಿಶೇಷವಾಗಿ ದಕ್ಷಿಣದಲ್ಲಿ ಕೇಂದ್ರೀಕೃತವಾದರೂ ಉತ್ತರ ಭಾರತದ ಛೋಟನಾಗಪುರದಲ್ಲಿ, ದ್ರಾವಿಡ ಭಾಷೆಯನ್ನು ಬಳಸುವ ಓರಾಯನರಲ್ಲಿ ಮತ್ತು ಕೋಲ್ ಭಾಷೆಯನ್ನು ಬಳಸುವ ಮುಂಡರಲ್ಲಿ ಬಲೂಚಿಸ್ಥಾನದ ಬ್ರಾಹುಇ ಭಾಷೆಯಲ್ಲಿ ದ್ರಾವಿಡ ಭಾಷೆಗಳ ಪ್ರಭಾವವನ್ನು ಕಾಣಬಹುದಾಗಿದೆ. ಮುಖ್ಯವಾಗಿ ಭಾರತಕ್ಕೆ ಬಂದು ನೆಲಸಿದ ವಿವಿಧ ಜನಾಂಗಗಳು ತಮ್ಮ ಸಂಸ್ಕೃತಿಯನ್ನು ಬೆಳಸಿ, ಅವೆಲ್ಲವನ್ನೂ ಒಂದುಗೂಡಿಸಿ, ಭಾರತೀಯ ಸಂಸ್ಕøತಿಯನ್ನು ರೂಪಿಸಿಕೊಂಡಿದ್ದು ಇತಿಹಾಸದ ಮುಖ್ಯ ಘಟನೆಯಾಗಿದೆ. ಈ ಸಂಸ್ಕೃತಿಯ ಸಾಗರದಲ್ಲಿ ಗುಂಪುಗಳ ಕೊಡುಗೆಯನ್ನು ಬೇರ್ಪಡಿಸುವುದು ಸುಲಭದ ಕೆಲಸವಾಗದಿದ್ದರೂ ಅವುಗಳ ಮುಖ್ಯ ಲಕ್ಷಣಗಳು ತೋರಿಸುವುದು ಕಷ್ಟದ ಕೆಲಸವಾಗದು.

                                     

1.2. ಇತ್ತೀಚಿನ ಸಂಶೋಧನೆಗಳು ದ್ರಾವಿಡರ ನಾಗರೀಕತೆ

ದ್ರಾವಿಡರು ನಾಗರಿಕರಾಗಿದ್ದು ಭಾರತದಲ್ಲಿ ಪಟ್ಟಣಗಳನ್ನು ಕಟ್ಟಿ ನಗರ ನಾಗರಿಕತೆಯನ್ನು ರೂಪಿಸಿದರು. ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳನ್ನು ಬೆಳೆಸಿದರು. ಭಾರತದ ಎಲ್ಲ ಕಡೆಗಳಲ್ಲೂ ನೆಲೆಸಿದರು. ಬಲೂಚಿಸ್ತಾನದಲ್ಲಿ ಬಳಕೆಯಲ್ಲಿರುವ ಬ್ರಾಹುಇ ಭಾಷೆ ದ್ರಾವಿಡ ಭಾಷೆಯ ಛಾಯೆಯನ್ನು ಹೊಂದಿರುವುದರಿಂದ, ದ್ರಾವಿಡರು ಸಿಂಧ್, ರಜಪುಟಾಣ ಮತ್ತು ಮಾಳವದ ಮೂಲಕ ಈಗಿನ ಮಹಾರಾಷ್ಟ್ರ ಪ್ರದೇಶ ಮತ್ತು ದಕ್ಷಿಣ ಭಾರತದ ಇತರ ಪ್ರದೇಶಗಳಿಗು ಪ್ರಸರಿಸಿದರೆಂದು ಹೇಳಬಹುದಾಗಿದೆ. ಅಲ್ಲದೆ ಸುಪ್ರಸಿದ್ಧವಾದ ಸಿಂಧೂಕಣಿವೆ ನಾಗರಿಕತೆ ಪಟ್ಟಣದಲ್ಲಿ ಕೇಂದ್ರೀಕೃತವಾಗಿದ್ದು, ಅಲ್ಲಿನ ಭಾಷೆ ದ್ರಾವಿಡ ಭಾಷೆಯನ್ನು ಹೋಲುವುದರಿಂದ ಸಿಂಧೂಕಣಿವೆಯ ಜನ ದ್ರಾವಿಡ ಗುಂಪಿಗೆ ಸೇರಿದವರೆಂದು ಹೇಳುವುದು ತಪ್ಪಾಗಲಾರದು. ಈ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿದ ಹೀರಾಸ್ ಮತ್ತು ಎಸ್.ಆರ್.ರಾವ್ ಅವರು ಇದೇ ತೀರ್ಮಾನಕ್ಕೆ ಬಂದಿದ್ದಾರೆ.

                                     

1.3. ಇತ್ತೀಚಿನ ಸಂಶೋಧನೆಗಳು ಆರ್ಯರು ಮತ್ತು ದ್ರಾವಿಡರು

ಆರ್ಯರು ಭಾರತಕ್ಕೆ ಬಂದಾಗ ಇಲ್ಲಿ ಎರಡು ಗುಂಪುಗಳನ್ನು ಕಂಡರು. ಅವರನ್ನು ದಾಸ ಅಥವಾ ದಸ್ಯು ಮತ್ತು ನಿಷಾದರೆಂದು ಕರೆದರು. ಶತ್ರುಗಳಾದ ಅವರು ಆರ್ಯರಿಗೆ ದಾಸರೆನಿಸಿಕೊಂಡರು, ಕಳ್ಳರೆನಿಸಿಕೊಂಡರು. ಆದರೆ ದಾಸ ಅಥವಾ ದಸ್ಯು ಎಂಬ ಪದಗಳು ಪ್ರಾಚೀನ ಇರಾನಿನಲ್ಲೇ ಬಳಕೆಯಲ್ಲಿದ್ದುವು. ಅದು ಗುಂಪಿನ ನಾಮವಾಗಿತ್ತೇ ಹೊರತು ಸೇವಕನೆಂಬ ಅರ್ಥದಲ್ಲಿರಲಿಲ್ಲ. ಅಲ್ಲದೆ ಭಾರತದ ತತ್ತ್ವಶಾಸ್ತ್ರ, ಸಾಹಿತ್ಯ, ಧರ್ಮ ಮತ್ತು ಸಂಸ್ಕøತಿಯಲ್ಲಿಯ ಉದಾತ್ತ ಮತ್ತು ಒಳ್ಳೆಯ ಭಾವನೆಗಳೆಲ್ಲ ಆರ್ಯರಿಂದಲೇ ರೂಪಿತವಾಯಿತೆಂದೂ ಇಲ್ಲಿನ ಕಂದಾಚಾರ ಪದ್ಧತಿ ಮತ್ತು ಹಿಂದೂ ಧರ್ಮದಲ್ಲಿ ಕಂಡು ಬರುವ ಮೂಢನಂಬಿಕೆಗಳು, ಕೆಟ್ಟ ಲಕ್ಷಣಗಳು ದ್ರಾವಿಡರಿಂದ ಬಂತೆಂದೂ ಹೇಳುವುದು ವಾಡಿಕೆ. ಆದರೆ ಈ ಅಭಿಪ್ರಾಯ ಈಗ ತಿರಸ್ಕರಿಸಲ್ಪಟ್ಟಿದೆ.

                                     

1.4. ಇತ್ತೀಚಿನ ಸಂಶೋಧನೆಗಳು ಭಾರತದ ನಾಗರಿಕತೆ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲಿ ದ್ರಾವಿಡರ ಪಾತ್ರ

ಆರ್ಯ ಮತ್ತು ದ್ರಾವಿಡ ಲಕ್ಷಣಗಳನ್ನು ಆಳವಾಗಿ ಪಾಂಡಿತ್ಯಪೂರ್ಣವಾಗಿ ವಿವೇಚಿಸಿರುವ ವಿದ್ವಾಂಸರ ಅಭಿಪ್ರಾಯದ ಪ್ರಕಾರ ಭಾರತದ ನಾಗರಿಕತೆ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲಿ ದ್ರಾವಿಡರ ಪಾತ್ರ ಹಿರಿದಾದುದೆಂದೂ ಸಿಂಧೂ ಕಣಿವೆಯಸಂಸ್ಕೃತಿ ಆರ್ಯರಿಗಿಂತ ಉತ್ತಮವಾದುದೆಂದೂ ತಿಳಿದು ಬಂದಿದೆ. ಹಿಂದೂಧರ್ಮದ ಅನೇಕ ದೇವತೆಗಳು ದ್ರಾವಿಡರ ಕೊಡುಗೆಯೇ ಶಿವಾರಾಧನೆ, ಮಾತೃದೇವತೆಯ ಪೂಜೆ, ನಂದಿ, ಶಿವ ಉಮೆಯರ ಪೂಜೆ, ಯೋಗ - ಇವು ದ್ರಾವಿಡ ಲಕ್ಷಣಗಳು. ದೇವರನ್ನು ಪೂಜಿಸುವ ಪದ್ಧತಿ ದ್ರಾವಿಡರದೇ ಆಗಿದೆ. ಹಿಂದೂಧರ್ಮದಲ್ಲಿ ಶ್ರೇಷ್ಠಸ್ಥಾನ ಪಡೆದ ಶಿವ, ಉಮೆ, ವಿಷ್ಣು, ಹನುಮಂತ ಮತ್ತು ಗಣೇಶ ಈ ದ್ರಾವಿಡ ದೇವರುಗಳು ಹಿಂದೂ ಧರ್ಮದಲ್ಲಿ ಸೇರಿಹೋಗಿವೆ.

                                     

1.5. ಇತ್ತೀಚಿನ ಸಂಶೋಧನೆಗಳು ಭಾರತೀಯರ ಸಂಸ್ಕೃತಿಯ ಮೇಲೆ ದ್ರಾವಿಡರ ಪ್ರಭಾವ

ದ್ರಾವಿಡರ ಪ್ರಭಾವವನ್ನು ಭಾರತೀಯರ ಸಂಸ್ಕೃತಿಯ ನಾನಾ ಪ್ರಕಾರಗಳಲ್ಲಿ ಕಾಣಬಹುದಾಗಿದೆ. ಉತ್ತರ ಭಾರತದ ಊರುಗಳ ಹೆಸರಿನಲ್ಲಿ, ವೇದ ಮತ್ತು ಭಾರತದ ಸಾಹಿತ್ಯದಲ್ಲಿ, ಆರ್ಯರ ಭಾಷೆಗಳಲ್ಲಿ. ಮತಪದ್ಧತಿಯಲ್ಲಿ ಸಂಪ್ರದಾಯದಲ್ಲಿ ಪುರಾಣದಲ್ಲಿ, ಇತಿಹಾಸದಲ್ಲಿ, ದ್ರಾವಿಡ ಲಕ್ಷಣಗಳನ್ನು ಗುರುತಿಸಲಾಗಿದೆ. ಆರ್ಯ ಸಂಸ್ಕೃತಿಯ ಬಹುಭಾಗ ದ್ರಾವಿಡರದೇ ಆಗಿದೆ. ಭಾರತೀಯ ಆರ್ಥಿಕ ವ್ಯವಸ್ಥೆ, ಭಾರತೀಯ ಭಾಷೆಗಳು, ಸಮಾಜಿಕ ಸಂಸ್ಥೆಗಳು ಮತ್ತು ಸಂಪ್ರದಾಯ ಮದುವೆ ಮುಂತಾದ ಪದ್ಧತಿಗಳು - ಇವುಗಳಲ್ಲಿ ದ್ರಾವಿಡರ ಪ್ರಭಾವವಿದೆ. ನಡೆ ನುಡಿಗಳಲ್ಲಿ ದ್ರಾವಿಡ ಛಾಯೆಯಿದೆ.

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →