Back

ⓘ ಹೊಳೆ ಬಬಲಾದಿ ಒಂದು ಚಿಕ್ಕ ಹಳ್ಳಿ ಹಾಗು ಪುಣ್ಯಕ್ಷೇತ್ರ. ಹೊಳೆ ಬಬಲಾದಿ ಗ್ರಾಮವು ಬಿಜಾಪುರ - ಗಲಗಲಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಾಪೂರದಿಂದ ಸುಮಾರು ೫೦ ಕಿ. ಮಿ. ಇದ್ದು ಬ ..




ಹೊಳೆ ಬಬಲಾದಿ
                                     

ⓘ ಹೊಳೆ ಬಬಲಾದಿ

ಹೊಳೆ ಬಬಲಾದಿ ಒಂದು ಚಿಕ್ಕ ಹಳ್ಳಿ ಹಾಗು ಪುಣ್ಯಕ್ಷೇತ್ರ. ಹೊಳೆ ಬಬಲಾದಿ ಗ್ರಾಮವು ಬಿಜಾಪುರ - ಗಲಗಲಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಾಪೂರದಿಂದ ಸುಮಾರು ೫೦ ಕಿ. ಮಿ. ಇದ್ದು ಬಬಲೇಶ್ವರ ಹೋಬಳಿ ಮತ್ತು ಗುಣದಾಳ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುತ್ತದೆ.

                                     

1. ಹವಾಮಾನ

  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಬೇಸಿಗೆ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ ಜೂನ, ೧೯.೬ ಕಿಮಿ/ಗಂ ಜುಲೈಹಾಗೂ ೧೭.೫ ಕಿಮಿ/ಗಂ ಅಗಸ್ಟ್ ಇರುತ್ತದೆ.
  • ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿ ವರೆಗೆಎಪ್ರೀಲನಲ್ಲಿ, ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ ಡಿಸೆಂಬರನಲ್ಲಿ ಉಷ್ಣತೆ ದಾಖಲಾಗಿದೆ.
                                     

2. ಸಾಂಸ್ಕೃತಿಕ

ಹೊಳೆ ಬಬಲಾದಿ ಗ್ರಾಮದ ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

                                     

3. ಕಲೆ ಮತ್ತು ಸಂಸ್ಕೃತಿ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು ಪಟಕ ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

                                     

4. ನೀರಾವರಿ

ಹೊಳೆ ಬಬಲಾದಿ ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

                                     

5. ಶಿಕ್ಷಣ

ಹೊಳೆ ಬಬಲಾದಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ ಪ್ರಸ್ತುತ ೫ ಜನ ಶಿಕ್ಷಕರಿದ್ದು, ೧ನೇ ತರಗತಿಯಿಂದ ೮ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ.

                                     

6. ನೀರಾವರಿ

ಹೊಳೆ ಬಬಲಾದಿ ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ನದಿ, ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ ಈರುಳ್ಳಿ, ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾಕಡಲೆಕಾಯಿ, ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

                                     

7. ಉದ್ಯೋಗ

ಹೊಳೆ ಬಬಲಾದಿ ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿ ಯಲ್ಲಿ ನಿರತರಾಗಿದ್ದಾರೆ. ಕೃಷಿ ಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

                                     

8. ಬೆಳೆಗಳು

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ ಈರುಳ್ಳಿ ಮತ್ತು ಶೇಂಗಾಕಡಲೆಕಾಯಿ ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.