Back

ⓘ ಜಟ್ಟಿನಾಳ. ಬೆಸಿಗೆ-ಚಳಿಗಾಲ ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿ ವರೆಗೆಎಪ್ರೀಲನಲ್ಲಿ, ಅತೀ ಕಡಿಮೆ ಅಂದ ..




ಜಟ್ಟಿನಾಳ
                                     

ⓘ ಜಟ್ಟಿನಾಳ

  • ಬೆಸಿಗೆ-ಚಳಿಗಾಲ ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ 43 ಡಿಗ್ರಿ ವರೆಗೆಎಪ್ರೀಲನಲ್ಲಿ, ಅತೀ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸವರೆಗೆ ಡಿಸೆಂಬರನಲ್ಲಿ ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - 35°C-42°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - 18°C-28°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ 300 - 600ಮಿಮಿ ಗಳಸ್ಟು ಆಗುತ್ತದೆ.
  • ಗಾಳಿ - ಗಾಳಿಯ ವೇಗ 18 ಕಿಮಿ/ಗಂ ಜೂನ, 19 ಕಿಮಿ/ಗಂ ಜುಲೈಹಾಗೂ 17 ಕಿಮಿ/ಗಂ ಅಗಸ್ಟ್ ಇರುತ್ತದೆ.
                                     

1. ಸಂಸ್ಕೃತಿ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು ಪಟಕ ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಗಳನ್ನು ಧರಿಸುತ್ತಾರೆ.

                                     

2. ಆಹಾರ ಖಾದ್ಯ

ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ, ಮೆಕ್ಕೆ ಜೋಳ ಹಾಗೂ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ವಿಜಯಪುರದ ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣೆ ಬದನೆಕಾಯಿ ಪಲ್ಯ, ಕೆನೆಮೊಸರು ಲಭ್ಯವಿರುತ್ತದೆ.

                                     

3. ಕೃಷಿ

ಗ್ರಾಮದ ಪ್ರತಿಶತ 90 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ ಈರುಳ್ಳಿ, ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾಕಡಲೆಕಾಯಿ, ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

                                     

4. ಉದ್ಯೋಗ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ 90% ಜನಸಂಖ್ಯೆ ಕೃಷಿ ಯಲ್ಲಿ ನಿರತರಾಗಿದ್ದಾರೆ. ಕೃಷಿ ಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿಸಾಕಾಣಿಕೆ ಉಪಕಸುಬುಗಳಾಗಿವೆ.

                                     

5. ಬೆಳೆಗಳು

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ ಈರುಳ್ಳಿ ಮತ್ತು ಶೇಂಗಾಕಡಲೆಕಾಯಿ ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

                                     

6. ಭಾಷೆಗಳು

ಗ್ರಾಮದ ಪ್ರಮುಖ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ.

ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

                                     

7. ದೇವಾಲಯ

  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ಮಾಳಿಂಗರಾಯ ದೇವಾಲಯ
  • ಶ್ರೀ ಹಣಮಂತ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ವೆಂಕಟೇಶ್ವರ ದೇವಾಲಯ
  • ಶ್ರೀ ಪಾಂಡುರಂಗ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ